ರಾಜು ಕಾಗೆ ಬಂಡಾಯ..!

ಈ ಸುದ್ದಿಯನ್ನು ಶೇರ್ ಮಾಡಿ

ಕಾಗವಾಡ, ಸೆ.24- ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಅವರ ಪುತ್ರ ಶ್ರೀನಿವಾಸ ಗೌಡ ಅವರಿಗೆ ಬಿಜೆಪಿ ಟಿಕೆಟ್ ನೀಡಿದರೆ ನಾನು ಬಂಡಾಯವಾಗಿ ಸ್ಪರ್ಧೆಗಿಳಿಯುತ್ತೇನೆ ಎಂದು ಮಾಜಿ ಶಾಸಕ ರಾಜು ಕಾಗೆ ಎಚ್ಚರಿಸಿದ್ದಾರೆ. ಇಂದು ಉಗಾರ್ ಖುರ್ದಾದಲ್ಲಿ ಬೆಂಬಲಿಗರ, ಹಿತೈಷಿಗಳ ಸಭೆ ಕರೆದ ಕಾಗೆಯವರು, ಈ ಕ್ಷೇತ್ರದಲ್ಲಿ ಬೇರೆಯವರಿಗೆ ಟಿಕೆಟ್ ನೀಡಿದರೆ ಸ್ವತಂತ್ರವಾಗಿ ಕಣಕ್ಕಿಳಿಯುತ್ತೇನೆ ಎಂದು ಹೇಳಿದರು.

ಶ್ರೀನಿವಾಸ ಗೌಡ ಬಿಜೆಪಿಯಿಂದ ಸ್ಪರ್ಧಿಸಿದರೆ ಇಲ್ಲಿ ಬಿಜೆಪಿಗೆ ಅಸ್ತಿತ್ವ ಇಲ್ಲದಂತಾಗುತ್ತದೆ. ದಶಕಗಳಿಂದ ನಾವು ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದೇವೆ. ಈಗ ಬೇರೆಯವರಿಗೆ ಟಿಕೆಟ್ ನೀಡಿದರೆ ಕಾರ್ಯಕರ್ತರಿಗೆ ಬೇಸರವಾಗುತ್ತದೆ.

ಸದ್ಯ ಈಗ ನಾನು ಏನೂ ಹೇಳುವುದಿಲ್ಲ. ಬೆಂಬಲಿಗರು, ಹಿತೈಷಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದರು. ಈ ನಡುವೆ ರಾಜು ಕಾಗೆ ಅವರಿಗೆ ಟಿಕೆಟ್ ನೀಡುವಂತೆ ಅವರ ಅಭಿಮಾನಿಗಳು ಮುಖ್ಯಮಂತ್ರಿ ಯಡಿಯೂರಪ್ಪನವರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.

Facebook Comments