ರಾಜ್ಯಸಭೆ ಚುನಾವಣೆ : 4 ನಾಮಪತ್ರ ಕ್ರಮಬದ್ಧ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.10- ವಿಧಾನಸಭೆ ಯಿಂದ ರಾಜ್ಯಸಭೆಯ ನಾಲ್ಕು ಸದಸ್ಯ ಸ್ಥಾನಗಳಿಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಸಲ್ಲಿಕೆಯಾಗಿದ್ದ ಐದು ಮಂದಿ ಅಭ್ಯರ್ಥಿಗಳ ನಾಮಪತ್ರ ಇಂದು ಪರಿಶೀಲನೆ ನಡೆಸಿದ್ದು, ಒಬ್ಬ ಅಭ್ಯರ್ಥಿಯ ನಾಮಪತ್ರ ತಿರಸ್ಕøತವಾಗಿದೆ.

ಜೆಡಿಎಸ್ ಅಭ್ಯರ್ಥಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಕಾಂಗ್ರೆಸ್ ಅಭ್ಯರ್ಥಿ ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ಅಭ್ಯರ್ಥಿ ಗಳಾದ ಈರಣ್ಣ ಕಡಾಡಿ, ಅಶೋಕ್ ಗಸ್ತಿ ಅವರ ನಾಮಪತ್ರಗಳು ಕ್ರಮಬದ್ಧವಾಗಿವೆ.

ಯಾವುದೇ ಶಾಸಕರು ಸೂಚಕರಾಗಿ ಸಹಿ ಹಾಕದ ಕಾರಣ ಪಕ್ಷೇತರ ಅಭ್ಯರ್ಥಿ ಸಂಗಮೇಶ್ ಚಿಕ್ಕನರಗುಂದ ಅವರ ನಾಮಪತ್ರ ತಿರಸ್ಕøತಗೊಂಡಿದೆ.  ರಾಜ್ಯಸಭೆಯ ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ನಾಮಪತ್ರಗಳ ಪರಿಶೀಲನೆ ನಡೆಸಿದರು.

ರಾಜ್ಯಸಭಾ ಚುನಾವಣಾ ಕಣದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್‍ನ ನಾಲ್ವರು ಅಭ್ಯರ್ಥಿಗಳು ಮಾತ್ರ ಕಣದಲ್ಲಿ ಉಳಿದಿರುವುದರಿಂದ ಇವರು ಅವಿರೋಧ ಆಯ್ಕೆಯಾದಂತಾಗಿದೆ.ನಾಮಪತ್ರ ವಾಪಸ್ ಪಡೆಯಲು ಜೂ.12ರವರೆಗೂ ಕಾಲಾವಕಾಶವಿದ್ದು, ಅಲ್ಲಿಯವರೆಗೂ ಚುನಾವಣಾ ಕಣದಲ್ಲಿರುವ ಅಭ್ಯರ್ಥಿ ತಮ್ಮ ಉಮೇದುವಾರಿಕೆಯನ್ನು ವಾಪಸ್ ಪಡೆಯಲು ಅವಕಾಶವಿದೆ.

ನಾಲ್ವರೇ ಅಭ್ಯರ್ಥಿಗಳು ಇರುವುದರಿಂದ ನಾಮಪತ್ರ ವಾಪಸ್ ಪಡೆಯುವ ಅವಧಿ ಮುಗಿದ ನಂತರ ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಚುನಾವಣಾಧಿಕಾರಿ ಅಧಿಕೃತವಾಗಿ ಪ್ರಕಟಿಸಲಿದ್ದಾರೆ.

Facebook Comments