ರಾಜ್ಯಸಭೆಯಲ್ಲಿ ಕರ್ನಾಟಕದ ಹೈಡ್ರಾಮಾ ಕುರಿತು ಗದ್ದಲ, ಕಲಾಪ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜು.22-ಕರ್ನಾಟಕದಲ್ಲಿ ಉದ್ಭವಿಸಿರುವ ರಾಜಕೀಯ ಹಗ್ಗ-ಜಗ್ಗಾಟ ವಿಷಯ ರಾಜ್ಯಸಭೆಯಲ್ಲಿಂದು ಮತ್ತೆ ಪ್ರತಿಧ್ವನಿಸಿ ಕಾಂಗ್ರೆಸ್ ಸದಸ್ಯರ ಭಾರೀ ಪ್ರತಿಭಟನೆ ಮತ್ತು ಗದ್ದಲದಿಂದ ಕೋಲಾಹಲ ಉಂಟಾಯಿತು. ಇದರಿಂದ ಕಲಾಪವನ್ನು ಮಧ್ಯಾಹ್ನದವರೆಗೂ ಮುಂದೂಡಲಾಯಿತು.

ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆ ಕರ್ನಾಟಕದಲ್ಲಿನ ರಾಜಕೀಯ ಬಿಕ್ಕಟ್ಟು ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯರು ಈ ಬಗ್ಗೆ ಚರ್ಚೆ ಅವಕಾಶ ನೀಡಬೇಕೆಂದು ಸಭಾಪತಿ ಡಾ.ಎಂ.ವೆಂಕಯ್ಯನಾಯ್ಡು ಅವರಲ್ಲಿ ಮನವಿ ಮಾಡಿದರು.

ಪ್ರಶ್ನೋತ್ತರ ಕಲಾಪ ಮೊಟಕುಗೊಳಿಸಿ ಈ ವಿಷಯ ಕುರಿತು ಚರ್ಚೆಗೆ ಸದ್ಯಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂಬ ಸಭಾಪತಿಯವರ ಹೇಳಿಕೆಯಿಂದ ಕುಪಿತಗೊಂಡ ಕಾಂಗ್ರೆಸ್ ಸದಸ್ಯರು ವೆಂಕಯ್ಯನಾಯ್ಡು ಅವರ ಪೀಠದ ಮುಂದಿನ ಸ್ಥಳಕ್ಕೆ ಧಾವಿಸಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ಉಳಿಸಿ, ನ್ಯಾಯ ಒದಗಿಸಿ ಎಂಬ ಘೋಷಣೆಗಳನ್ನು ಕೂಗಿ ಧರಣಿ ನಡೆಸಿದ ಕಾಂಗ್ರೆಸ್ ಸದಸ್ಯರ ಮನವೊಲಿಸುವಲ್ಲಿ ವಿಫಲರಾದ ಸಭಾಪತಿ ಸದನವನ್ನು ಮಧ್ಯಾಹ್ನದವರೆಗೆ ಮುಂದೂಡಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ