ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯಸಭಾ ಚುನಾವಣೆ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಮಾ.24-ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಮಾ.26ರಂದು ನಡೆಯಬೇಕಿದ್ದ ರಾಜ್ಯಸಭಾ ಚುನಾವಣೆಯನ್ನು ರದ್ದುಗೊಳಿಸಿದೆ. ದೆಹಲಿ ಸೇರಿದಂತೆ ಬಹುತೇಕ ರಾಜ್ಯಗಳ ಮಾ.31ರವರೆಗೆ ಸಂಪೂರ್ಣ ಲಾಕ್‍ಡೌನ್ ವಿಧಿಸಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಈ ನಿರ್ಧಾರ ಕೈಗೊಂಡಿದೆ.

ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಧ್ಯಪ್ರದೇಶದ ಪ್ರಭಾವಿ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಕೇಸರಿ ಪಕ್ಷವು ರಾಜ್ಯಸಭಾ ನಾಮನಿರ್ದೇಶನ ನೀಡಿತು. ಈ ಹಿನ್ನೆಲೆಯಲ್ಲಿ 55 ಸ್ಥಾನಗಳನ್ನು ಭರ್ತಿ ಮಾಡಲು ಚುನಾವಣೆ ಮಾ.26 ರಂದು ಚುನಾವಣೆ ನಡೆಯಬೇಕಿತ್ತು.

ಈಗಾಗಲೇ 37 ಅಭ್ಯರ್ಥಿಗಳು ಸ್ಪರ್ಧೆಯಿಲ್ಲದೆ ಆಯ್ಕೆಯಾಗಿದ್ದಾರೆ. ಪ್ರಸ್ತುತ ಪರಿಸ್ಥಿತಿಯನ್ನು ಆಧರಿಸಿ ಉಳಿದ 18 ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆಯನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗುಗುತ್ತಿದೆ. ಭಾರತದಲ್ಲಿ ಇದುವರೆಗೆ ಕರೋನವೈರಸ್ ಪ್ರಕರಣಗಳು 500 ದಾಟಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಇಂದು ಮಾಹಿತಿ ನೀಡಿದೆ.

Facebook Comments

Sri Raghav

Admin