ರಕ್ಷಾ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ 1 ಲಕ್ಷ ಉಚಿತ ನೋಟ್ ಬುಕ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.19- ರಕ್ಷಾ ಫೌಂಡೇಶನ್ ವತಿಯಿಂದ ಬೆಂಗಳೂರು ದಕ್ಷಿಣ ಸುತ್ತಮುತ್ತಲಿನ ಸರ್ಕಾರಿ ಮಾನ್ಯತೆ ಪಡೆದ ಶಾಲೆಗಳ 10 ಸಾವಿರ ವಿದ್ಯಾರ್ಥಿಗಳಿಗೆ 1 ಲಕ್ಷ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದು ಫೌಂಡೇಶನ್‍ನ ಸಂಸ್ಥಾಪಕ ಸಿ.ಕೆ.ರಾಮಮೂರ್ತಿ ತಿಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಇದೇ 22ರಂದು ಜಯನಗರದ ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ಹೇಳಿದರು.

ನಮ್ಮ ಸಂಸ್ಥೆ ಕಳೆದ 8 ವರ್ಷಗಳಿಂದ ವಿದ್ಯಾರ್ಥಿಗಳಿಗೆ ವಿವಿಧ ರೀತಿಯಲ್ಲಿ ಅನುಕೂಲ ಮಾಡಿಕೊಡುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ 10 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಲಾಗುತ್ತಿದೆ. ಇದೇ ವೇಳೇ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ 30 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.

ವಿಕಲಚೇತನ ಮತ್ತು ಉನ್ನತ ಮಟ್ಟದ ಶೈಕ್ಷಣಿಕ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ವಿತರಣೆ ಮಾಡಲಾಗುವುದು,ಸರ್ಕಾರಿ ಮಾನ್ಯತೆ ಪಡೆದ ಶಾಲೆಗಳಿಗೆ ಗಡಿಯಾರ ವಿತರಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದು ಮುಖ್ಯ ಅಥಿಗಳಾಗಿ ಮೆಯೇರ್ ಗಂಗಾಂಬಿಕೆ ಮಲ್ಲಿಕಾರ್ಜುನ್, ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ, ಮಾಜಿಉಪ ಮುಖ್ಯಮಂತ್ರಿ ಆರ್.ಅಶೋಕ್ ,ಶಾಸಕಿ ಸೌಮ್ಯರೆಡ್ಡಿ , ವಿಧಾನ ಪರಿಷತ್ ಮಾಜಿ ಸದಸ್ಯೆ ತಾರಾಅನುರಾಧಾ ಭಾಗವಹಿಸಲಿದ್ದಾರೆ ಎಂದು ಸಿ.ಕೆ.ರಾಮಮೂರ್ತಿ ತಿಳಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ