ಮಹಿಳೆಯರ ಮೇಲಿನ ಹಿಂಸಾಚಾರ, ಸಮಾಜದಿಂದ ಕಣ್ಮರೆಯಾದ ಸಮಾನತೆ ಹಕ್ಕು : ರಾಷ್ಟ್ರಪತಿ ಕಳವಳ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಡಿ.10- ದೇಶದ ವಿವಿಧೆಡೆ ಮಹಿಳೆಯರ ಮೇಲೆ ನಡೆಯುತ್ತಿರುವ ಹೀನ ಹಿಂಸಾಕೃತ್ಯಗಳ ಬಗ್ಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಮಮ್ಮಲ ಮರುಗಿದ್ದಾರೆ.  ಮಹಿಳೆಯರ ಮೇಲೆ ನಡೆಯುತ್ತಿರುವ ಕ್ರೂರ ಹಿಂಸಾಚಾರಗಳನ್ನು ಗಮನಿಸಿದರೆ ಸಮಾನತೆಯ ಹಕ್ಕು ಸಮಾಜದಿಂದ ಕಣ್ಮರೆಯಾಗಿದೆಯೇ ಎಂಬ ಅನುಮಾನ ಬರುತ್ತದೆ. ಸಮಾಜವು ಈ ಹಕ್ಕನ್ನು ತ್ಯಜಿಸಿದೆ ಎಂಬ ಸಂಶಯವೂ ಸಹ ವ್ಯಕ್ತವಾಗುತ್ತಿದೆ ಎಂದು ವಿಷಾದಿಸಿದರು.

ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಪ್ರಯುಕ್ತ ದೆಹಲಿಯಲ್ಲಿಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‍ಎಚ್‍ಆರ್‍ಸಿ) ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ಮಾತನಾಡಿ, ಮಹಿಳೆಯರ ಮೇಲಿನ ಅತ್ಯಾಚಾರ, ಕಗ್ಗೊಲೆ ಮತ್ತು ಇನ್ನಿತರ ಅಪರಾಧ ಕೃತ್ಯಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದರು.

ಮಹಿಳೆಯರಿಗೆ ರಕ್ಷಣೆ, ಮಾನವ ಹಕ್ಕುಗಳ ಸಂರಕ್ಷಣೆ ಇವುಗಳ ಬಗ್ಗೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಅವಲೋಕನ ಮಾಡಿದಾಗ ಮಾತ್ರ ಮಾನವ ಹಕ್ಕುಗಳ ಘೋಷವಾಕ್ಯಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ರಾಷ್ಟ್ರಪತಿ ಹೇಳಿದರು.

Facebook Comments