ಬ್ರೇಕಿಂಗ್ : ಬಿಜೆಪಿಗೆ ಮತ್ತೊಂದು ಆಘಾತ, ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಇನ್ನಿಲ್ಲ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ : ಕೇಂದ್ರ ಆಹಾರ ಮತ್ತು ನಾಗರಿಕ ಸಚಿವ ರಾಮ್ ವಿಲಾಸ್ ಪಾಸ್ವಾನ್ ( 74) ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ದೆಹಲಿಯ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಸರಾಮ ವಿಲಾಸ್ ಪಾಸ್ವಾನ್ ಮಗ ಚಿರಾಗ್ ಪಾಸ್ವಾನ್ ತಮ್ಮ ತಂದೆ ಸಾವಿನ ಕುರಿತು ಟ್ವೀಟ್ ಮೂಲಕ ಧೃಡಪಡಿಸಿದ್ದಾರೆ.

ನವದೆಹಲಿ : ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ( 74) ಇಂದು ನವದೆಹಲಿಯಲ್ಲಿ ನಿಧನರಾಗಿದ್ದರೆ.

ಪಾಸ್ವಾನ್ ಅವರ ನಿಧನದ ಸುದ್ದಿಯನ್ನು ಅವರ ಪುತ್ರ ಹಾಗೂ ಸಂಸದ ಚಿರಾಗ್ ಪಾಸ್ವಾನ್ ಟ್ವಿಟರ್ ನಲ್ಲಿ ಖಚಿತಪಡಿಸಿದ್ದಾರೆ.ಅವರ ನಿಧನಕ್ಕೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ , ಉಪರಾಷ್ಡ್ರಪತಿ, ವೆಂಕಯ್ಯ ನಾಯ್ಡು,ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಕಂಬನಿ ಮಿಡಿದಿದ್ದಾರೆ.

ಎನ್‌ಡಿಎ ಸರ್ಕಾರದಲ್ಲಿ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ಪೂರೈಕೆ ಖಾತೆ ಸಚಿವರಾಗಿರುವ ರಾಮ್ ವಿಲಾಸ್ ಪಾಸ್ವಾನ್ ಬಿಹಾರದವರು. ಅವರು ಎನ್‌ಡಿಎ ಸರ್ಕಾರದ ಜೊತೆ ಕೈಜೋಡಿಸಿರುವ ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷರೂ ಹೌದು.

ಬಿಹಾರ ವಿಧಾನಸಭಾ ಕ್ಷೇತ್ರದ ಚುನಾವಣೆ ಘೋಷಣೆಯಾಗಿರುವ ಸಂದರ್ಭದಲ್ಲೇ ಪಾಸ್ಬಾನ್ ನಿಧನ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.ಶ್ವಾಸಕೋಶ ಮತ್ತು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ರಾಮ್ ವಿಲಾಸ್ ಪಾಸ್ವಾನ್ ಅವರು ಭಾನುವಾರ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ, ನಾಲ್ಕು ದಿನಗಳ ಹಿಂದೆ ಒಮ್ಮೆಲೇ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾದ ಕಾರಣ, ತಡರಾತ್ರಿ ತುರ್ತಾಗಿ ಹೃದಯ ಶಸ್ತ್ರಚಿಕಿತ್ಸೆ ಮಾಡಬೇಕಾಯಿತು. ಇನ್ನು ಕೆಲವು ವಾರದ ಬಳಿಕ ಅಗತ್ಯ ಬಿದ್ದರೆ ಇನ್ನೊಂದು ಶಸ್ತ್ರಚಿಕಿತ್ಸೆ ಮಾಡಬೇಕಾಗುತ್ತದೆ ಎಂದು ಮಾಹಿತಿ ನೀಡಿದ್ದರು.ಸಚಿವ ಪಾಸ್ವಾನ್ ಅವರಿಗೆ ಈ ಮೊದಲೇ ಹೃದಯ ಸಂಬಂಧಿ ತೊಂದರೆಗಳು ಕಾಣಿಸಿಕೊಂಡಿದ್ದವು.

2017ರಲ್ಲಿ ಲಂಡನ್ ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪಾಸ್ವಾನ್, ಇದಕ್ಕೂ ಮೊದಲು ಆ್ಯಂಜಿಯೋಪ್ಲಾಸ್ಟಿ ಗೆ ಒಳಗಾಗಿದ್ದರು.ರಾಮ್ ವಿಲಾಸ್ ಪಾಸ್ವಾನ್ ಅವರು ಕಳೆದ 32 ವರ್ಷಗಳಲ್ಲಿ ಹನ್ನೊಂದು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. ಅದರಲ್ಲಿ ಒಂಬತ್ತು ಬಾರಿ ಜಯಿಸಿದ್ದು, ಆರು ಪ್ರಧಾನಿಗಳ ಜೊತೆಗೆ ಕೆಲಸ ಮಾಡಿದ್ದಾರೆ.

ಕಳೆದ ವಾರ ಪಾಸ್ವಾನ್ ನನ್ನ ಆರೋಗ್ಯದ ಸ್ಥಿತಿಯನ್ನು ಕಂಡ ಪುತ್ರ ಚಿರಾಗ್ ಒತ್ತಾಯಿಸಿ ನನ್ನನ್ನು ಆಸ್ಪತ್ರೆಗೆ ಕರೆತಂದಿದ್ದಾನೆ. ನನ್ನ ಪುತ್ರ ನನ್ನ ಜೊತೆ ಇದ್ದಾನೆ ಎಂಬುದೇ ಸಂತಸದ ಸಂಗತಿ. ನನ್ನ ಆರೋಗ್ಯ ವಿಚಾರಿಸಿಕೊಳ್ಳುವುದರ ಜೊತೆಗೆ ಪಕ್ಷವನ್ನು ಬಿಹಾರ ಚುನಾವಣೆಗೆ ಸಜ್ಜುಗೊಳಿಸುತ್ತಿದ್ದಾನೆ. ಪಕ್ಷದ ಕಾರ್ಯಕರ್ತರು ಯುವ ನೇತಾರನ ಬೆನ್ನಿಗೆ ನಿಂತು ಹೊಸ ಭವಿಷ್ಯ ರೂಪಿಸುತ್ತಾರೆ ಎಂಬ ಭರವಸೆ ಇದೆ, ಆದಷ್ಟು ಬೇಗ ನಾನು ಗುಣಮುಖನಾಗಿ ನಿಮ್ಮ ಸೇವೆಗೆ ಲಭ್ಯವಾಗುತ್ತೇನೆ ಎಂಬರ್ಥದಲ್ಲಿ ಮೂರು ಸರಣಿ ಟ್ವೀಟ್ ಮಾಡಿದ್ದರು.

ಈ ಹಿಂದೆ ಮಾಜಿ ಪ್ರಧಾನಿ ದಿ.ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಅವರು, 2004ರಲ್ಲಿ ಅಧಿಕಾರಕ್ಕೆ ಬಂದ ಯುಪಿಎ ಸರ್ಕಾರದ ಅವಧಿಯಲ್ಲಿಯೂ ಸಚಿವರಾಗಿದ್ದರು.
ಬಿಹಾರದ ರಾಜಧಾನಿ ಪಟ್ನಾದ ಸಮೀಪವೇ ಇರುವ ಹಾಜಿಪುರ ಲೋಕಸಭೆ ಕ್ಷೇತ್ರದ ಸಂಸದರಾಗಿದ್ದ ಅವರು, ಮುಂದಿನ ಕಳೆದ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಿದೆ,ರಾಜ್ಯಸಭೆ ಪ್ರವೇಶ ಮಾಡಿದ್ದರು.

# ರಾಜಕೀಯದ ಬದುಕು :
ಸಂಯುಕ್ತ ಸೋಷಿಯಲಿಸ್ಟ್ ಪಕ್ಷದ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದ ಪಾಸ್ವಾನ್, 1969ರಲ್ಲಿ ಬಿಹಾರ ವಿಧಾನಸಭೆಗೆ ಶಾಸಕರಾಗಿ ಆಯ್ಕೆಯಾಗಿದರು. ಅಲೋಲಿ ಕ್ಷೇತ್ರದಿಂದ ಅವರು ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರಬಲ ಅಭ್ಯರ್ಥಿಯನ್ನು 700 ಮತಗಳಿಂದ ಸೋಲಿಸಿದ್ದರು.

# ಎಂಟು ಬಾರಿ ಸಂಸತ್ ಸದಸ್ಯ :
1977, 1980, 1989, 1996, 1999, 2004 ಮತ್ತು 2014ರಲ್ಲಿ ಅವರು ಲೋಕಸಭೆಗೆ ಚುನಾಯಿತರಾಗಿದ್ದರು. ಎಂಟು ಬಾರಿ ಲೋಕಸಭೆ ಸದಸ್ಯರಾಗಿ ಮತ್ತು ರಾಜ್ಯಸಭೆ ಸದಸ್ಯರಾಗಿ ಅವರು ರಾಷ್ಟ್ರ ರಾಜಕಾರಣದಲ್ಲಿ ಅಪಾರ ಅನುಭವ ಹೊಂದಿದ್ದಾರೆ.

1985ರಲ್ಲಿ ರಾಷ್ಟ್ರೀಯ ಲೋಕದಳದ ಪ್ರಧಾನ ಕಾರ್ಯದರ್ಶಿಯಾದರು. 1987ರಲ್ಲಿ ಜನತಾ ಪಾರ್ಟಿಯೊಂದಿಗೆ ಕೈಜೋಡಿಸಿದರು. ಮರುವರ್ಷ ಜಯಪ್ರಕಾಶ್ ನಾರಾಯಣ್ ನೇತೃತ್ವದಲ್ಲಿ ಜನತಾ ಪಕ್ಷಗಳು ಒಂದಾಗಿ ಜನತಾ ದಳ ರಚನೆಯಾಯಿತು. ಆಗಲೂ ಅದರ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದರು. ಆದರೆ, 2000ದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಬಳಗವನ್ನು ಸೇರುವ ವಿಚಾರದಲ್ಲಿ ಜನತಾದಳ ಇಬ್ಭಾಗವಾಯಿತು.

ಆಗ ಪಾಸ್ವಾನ್ ಮತ್ತು ಪಕ್ಷದ ಇತರೆ ಸದಸ್ಯರು ಜತೆಗೂಡಿ ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ) ರಚಿಸಿದರು. ಅಲ್ಲಿಂದ ಇಲ್ಲಿಯವರೆಗೂ ಪಾಸ್ವಾನ್ ಪಕ್ಷದ ಅಧ್ಯಕ್ಷರಾಗಿ ಮುಂದುವರಿದಿದ್ದರು.1989 -90ರ ಅವಧಿಯಲ್ಲಿ ವಿಪಿ ಸಿಂಗ್ ನೇತೃತ್ವದ ನ್ಯಾಷನಲ್ ಪ್ರಂಟ್ ಸರ್ಕಾರದಲ್ಲಿ ಕಾರ್ಮಿಕ ಮತ್ತು ಕಲ್ಯಾಣ ಸಚಿವರಾಗಿ ಪಾಸ್ವಾನ್ ಕಾರ್ಯನಿರ್ವಹಿಸಿದ್ದರು.

1996-98ರ ಅವಧಿಯಲ್ಲಿನ ನ್ಯಾಷನಲ್ ಫ್ರಂಟ್ ಸರ್ಕಾರದ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದರು. ವಾಜಪೇಯಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಾಗ 1999-2001ರ ಅವಧಿಯಲ್ಲಿ ಸಂವಹನ ಸಚಿವರಾಗಿ ಮತ್ತು 2001-02ರಲ್ಲಿ ಕಲ್ಲಿದ್ದಲು ಹಾಗೂ ಗಣಿ ಖಾತೆ ಸಚಿವರಾಗಿದ್ದರು.

# ಖಾಸಗಿ ಬದುಕು
1946ರಲ್ಲಿ ಬಿಹಾರದ ದಲಿತ ಕುಟುಂಬದಲ್ಲಿ ಜನಿಸಿದ ಪಾಸ್ವಾನ್, ಪಟ್ನಾ ವಿಶ್ವವಿದ್ಯಾಲಯದಲ್ಲಿ ಕಾನೂನು ಮತ್ತು ಕಲಾ ಪದವಿ ಪಡೆದುಕೊಂಡರು. 1960ರಲ್ಲಿ ರಾಜಕುಮಾರಿ ದೇವಿ ಅವರನ್ನು ಮದುವೆಯಾದರು. 2014ರಲ್ಲಿ ಅವರ ಲೋಕಸಭೆ ನಾಮಪತ್ರಿಕೆ ಸಲ್ಲಿಕೆಯ ಬಗ್ಗೆ ಪ್ರಶ್ನೆಗಳು ಎದ್ದಾಗ, ಪತ್ನಿಗೆ 1981ರಲ್ಲಿಯೇ ವಿಚ್ಛೇದನ ನೀಡಿದ್ದಾಗಿ ಬಹಿರಂಗಪಡಿಸಿದರು. ಮೊದಲ ಪತ್ನಿಯಿಂದ ಉಷಾ ಮತ್ತು ಆಶಾ ಎಂಬ ಇಬ್ಬರು ಹೆಣ್ಣುಮಕ್ಕಳಿದ್ದಾರೆ.

1983ರಲ್ಲಿ ಅವರು ಅಮೃತಸರದ ಪಂಜಾಬಿ ಹಿಂದೂ ಕುಟುಂಬದ ಗಗನಸಖಿ ರೀನಾ ಶರ್ಮಾ ಅವರನ್ನು ಮದುವೆಯಾದರು. ಅವರಿಗೆ ಇಬ್ಬರು ಮಕ್ಕಳು. ಅವರ ಪುತ್ರ ಚಿರಾಗ್ ಪಾಸ್ವಾನ್ ನಟ ಮತ್ತು ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ.

Facebook Comments

Sri Raghav

Admin