ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ನೆನೆದ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಜು.5- ಎಲ್ಜೆಪಿ ಪಕ್ಷದ ಸಂಸ್ಥಾಪಕ ಹಾಗೂ ಕೇಂದ್ರದ ಮಾಜಿ ಸಚಿವ ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರು ತುಳಿತಕ್ಕೊಳಗಾದವರ ಉದ್ದಾರಕ್ಕೆ ಹಾಗೂ ಸಮಾಜ ಸೇವೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಟ್ವಟ್ ಮಾಡಿ ನಮನ ಸಲ್ಲಿಸಿರುವ ಮೋದಿ ಅವರು ಆಗಲಿದ ನಾಯಕರ ಗುಣಗಾನ ಮಾಡಿದ್ದಾರೆ.

ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದ ಪಾಸ್ವಾನ್ ಅವರು ಕಳೆದ ಆಕ್ಟೋಬರ್ನಲ್ಲಿ ಮೃತಪಟ್ಟಿದ್ದರು. ನನ್ನ ಅತ್ಯುತ್ತಮ ಸ್ನೇಹಿತರಾಗಿದ್ದ ಪಾಸ್ವಾನ್ ಅವರು ತಮ್ಮ ಜೀವನವನ್ನೇ ದಲಿತರ ಕಲ್ಯಾಣಕ್ಕಾಗಿ ಮುಡಿಪಾಗಿಟ್ಟಿದ್ದರು ಎಂದು ಶ್ಲಾಘಿಸಿದ್ದಾರೆ.

Facebook Comments

Sri Raghav

Admin