ಕಾಂಗ್ರೆಸ್‌ನಲ್ಲಿ ಸಾಮೂಹಿಕ ಬದಲಾವಣೆಯ ಅಗತ್ಯವಿದೆ : ರಾಮಲಿಂಗಾರೆಡ್ಡಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.6- ಕಳೆದ ಲೋಕಸಭೆ ಚುನಾವಣೆಯಲ್ಲಿ ನಾವು ಒಂದೇ ಒಂದು ಸ್ಥಾನವನ್ನು ಗೆದ್ದಿದ್ದೇವೆ. ಅದನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕತ್ವದಲ್ಲಿ ಸಾಮೂಹಿಕ ಬದಲಾವಣೆ ತರುವ ಅಗತ್ಯವಿದೆ ಎಂದು ಹಿರಿಯ ನಾಯಕ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಖಾಸಗಿ ಹೋಟೆಲ್‍ನಲ್ಲಿಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಅವರ ಜತೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ನಮ್ಮ ಎಲ್ಲಾ ಅಭಿಪ್ರಾಯಗಳನ್ನು ಎಲ್ಲಾ ಹುದ್ದೆಗಳಿಗೆ ಸಂಬಂಧಪಟ್ಟಂತೆ ಹೇಳಿದ್ದೇವೆ ಎಂದರು.

2013ರ ಚುನಾವಣೆಯಲ್ಲಿ ಕಾಂಗ್ರೆಸ್‍ನ ಉಸ್ತುವಾರಿ ವಹಿಸಿದ್ದ ಮಧುಸೂದನ್ ಮಿಸ್ತ್ರಿ ಅವರು ಇಂದು ವೀಕ್ಷಕರಾಗಿ ಆಗಮಿಸಿದ್ದಾರೆ. ಅವರ ಬಳಿ ನಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದೇವೆ. ಹೈಕಮಾಂಡ್ ಇದರ ಆಧಾರದ ಮೇಲೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ವಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರು ಕೇಳಿ ಬಂದಿದೆ. ಮಾಜಿ ಸಚಿವ ಎಚ್.ಕೆ.ಪಾಟೀಲ್ ಹಾಗೂ ಪರಮೇಶ್ವರ್ ಕೂಡ ಆಕಾಂಕ್ಷಿಯಾಗಿದ್ದಾರೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು.

Facebook Comments