‘ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳೊಂದಿಗೆ ಕಾಂಗ್ರೆಸ್‍ಗೆ ಸಂಬಂಧವಿಲ್ಲ’

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.18- ಪಾಪ್ಯುಲರ್ ಫ್ರೆಂಟ್ ಆಫ್ ಇಂಡಿಯಾ ಹಾಗೂ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಗಳೊಂದಿಗೆ ಕಾಂಗ್ರೆಸ್ ಪಕ್ಷ ಸಂಬಂಧವಿರಿಸಿಕೊಂಡಿಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಫ್‍ಐ ಮತ್ತು ಎಸ್‍ಡಿಪಿಐ ಸಂಘಟನೆಗಳ ಬಗ್ಗೆ ನಮ್ಮ ಪಕ್ಷ ಮೃದು ಧೋರಣೆ ತಾಳಿಲ್ಲ ಎಂದರು. ಪಿಎಫ್‍ಐ ಮತ್ತು ಎಸ್‍ಡಿಪಿಐ ಸಂಘಟನೆಗಳನ್ನು ನಿಷೇಧಿಸುವ ಕುರಿತಂತೆ ಅನೇಕ ವರ್ಷಗಳಿಂದಲೂ ಚಿಂತನೆ ನಡೆಸಲಾಗುತ್ತಿದ್ದು, ಈ ಕುರಿತಂತೆ ಗೃಹ ಇಲಾಖೆ ಪರಿಶೀಲನೆ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷ ಯಾವತ್ತೂ ಸಂಘಟನೆಗಳನ್ನು ಬೆಂಬಲಿಸಿಲ್ಲ ಎಂದು ಹೇಳಿದರು.

ನಮ್ಮ ಅಧಿಕಾರಾವಧಿಯಲ್ಲಿ ಎಲ್ಲಾ ಪಕ್ಷದವರ ಮೇಲೂ ಇದ್ದ ಕೇಸ್‍ಗಳನ್ನು ವಾಪಸ್ ಪಡೆದುಕೊಳ್ಳಲಾಗಿತ್ತು. ಆದರೆ ಬಿಜೆಪಿಯವರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡದಿದ್ದರೆ ನಿದ್ರೆಯೇ ಬರುವುದಿಲ್ಲ ಎಂದು ರೆಡ್ಡಿ ಟಾಂಗ್ ನೀಡಿದರು.

Facebook Comments