ರಾಮನಗರ ಜೈಲು ಈಗ ಕಂಟೈನ್ಮೆಂಟ್ ಝೋನ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.25- ಪಾದರಾಯನಪುರ ಘಟನೆಯ ಆರೋಪಿಗಳಿದ್ದ ರಾಮನಗರ ಜಿಲ್ಲಾ ಕಾರಾಗೃಹವನ್ನು ಕಂಟೈನ್ಮೆಂಟ್ ಝೋನ್ ಆಗಿ ಘೋಷಿಸಲಾಗಿದೆ.

ಕೊರೋನಾ ಹರಡುವಿಕೆ ತಡೆಯುವ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗೃತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ರಾಮನಗರ ನಗರಸಭಾ ಆಯುಕ್ತರಾದ ಶುಭಾ ಅವರನ್ನು ವಿಶೇಷ ಕಾರ್ಯನಿರ್ವಾಹಕ ದಂಡಾಕಾರಿ ಮತ್ತು ಘಟನಾ ಕಮಾಂಡರ್ ಆಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಪಾದರಾಯನಪುರ ಘಟನೆಯ ಆರೋಪಿಗಳ ಪೈಕಿ ಐದು ಮಂದಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಅಲ್ಲದೆ, ನಗರಸಭೆಯ ಏಳು ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

ರಾಮನಗರ ಕಾರಾಗೃಹದಿಂದ ಆರೋಪಿಗಳನ್ನು ಬೆಂಗಳೂರಿನ ಹಜ್ ಭವನಕ್ಕೆ ಸ್ಥಳಾಂತರ ಮಾಡಲಾಗಿದೆ. ಆರೋಪಿಗಳನ್ನು ರಾಮನಗರ ಕಾರಾಗೃಹಕ್ಕೆ ಸ್ಥಳಾಂತರ ಮಾಡದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಒತ್ತಾಯಿಸಿದ್ದರು.

Facebook Comments

Sri Raghav

Admin