ರಾಮನಗರ ಲಾಕ್‌ಡೌನ್‌ಗೆ ಮಾಜಿ ಸಿಎಂ ಎಚ್ಡಿಕೆ ಸಲಹೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.12-ಬೆಂಗಳೂರು ನಗರ ಜಿಲ್ಲೆಗೆ ಹೊಂದಿಕೊಂಡಂತೇ ಇರುವ ರಾಮನಗರ ಜಿಲ್ಲೆಯನ್ನೂ ಲಾಕ್‌ಡೌನ್‌ ಮಾಡುವಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಕಂದಾಯ ಸಚಿವ ಆರ್‌.ಅಶೋಕ್‌, ರಾಮನಗರ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಯೊಂದಿಗೆ ಭಾನುವಾರ ಸಮಾಲೋಚನೆ ನಡೆಸಿದ ಎಚ್‌ಡಿಕೆ ಲಾಕ್‌ಡೌನ್‌ನ ಅಗತ್ಯತೆಯನ್ನು ವಿವರಿಸಿದ್ದಾರೆ.

‘ಬೆಂಗಳೂರಿನೊಂದಿಗೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಲಾಕ್‌ಡೌನ್‌ ಮಾಡಲಾಗಿದೆ. ಆದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲೂಕುಗಳಿಗಿಂತಲೂ ಬೆಂಗಳೂರಿಗೆ ಹೆಚ್ಚು ಹತ್ತಿರವಿರುವ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಿಂತಲೂ ಅಧಿಕ ಸೋಂಕಿನ ಪ್ರಕರಣಗಳನ್ನು ಹೊಂದಿರುವ ರಾಮನಗರ ಜಿಲ್ಲೆಯನ್ನು ಲಾಕ್‌ಡೌನ್‌ ಮಾಡಲೇಬೇಕಾದ್ದನ್ನು ಎಚ್‌ಡಿಕೆ ವಿವರಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Facebook Comments

Sri Raghav

Admin