ಕೇಂದ್ರ ಸಚಿವ ರಾಮ್ದಾಸ್ ಮೇಲೆ ಯುವಕನ ಹಲ್ಲೆ
ಈ ಸುದ್ದಿಯನ್ನು ಶೇರ್ ಮಾಡಿ
ಮುಂಬೈ, ಡಿ.9- ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್ಪಿಐ) ನಾಯಕ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ರಾಮ್ದಾಸ್ ಅಟವಳೆ ಅವರ ಮೇಲೆ ಹಲ್ಲೆ ನಡೆಸಲಾಗಿದೆ.
ಮಹಾರಾಷ್ಟ್ರದ ಅಂಬರ್ನಾಥ್ನಲ್ಲಿ ಈ ಘಟನೆ ನಡೆದಿದ್ದು, ಯುವಕನೊಬ್ಬ ಆರ್ಪಿಐ ರಾಷ್ಟ್ರೀಯ ಅಧ್ಯಕ್ಷರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಆರ್ಪಿಐ ಪಕ್ಷದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಮಾರಂಭ ಮುಗಿಸಿ ಹೊರಗೆ ಬಂದ ರಾಮ್ದಾಸ್ ಅವರ ಮೇಲೆ ಗೊಸಾವಿ ಎಂಬ ಯುವಕ ಹಠಾತ್ ಹಲ್ಲೆ ನಡೆಸಿದ್ದಾನೆ.
ತಕ್ಷಣ ಯುವಕನನ್ನು ಹಿಡಿದ ಗುಂಪು ಮತ್ತು ಸಚಿವರ ಬೆಂಬಲಿಗರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದು, ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಸಚಿವರ ಮೇಲಿನ ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಲ್ಲೆ ನಡೆಸಿದ ಯುವಕನನ್ನು ಚಿಕಿತ್ಸೆ ನಂತರ ವಿಚಾರಣೆಗೆ ಒಳಪಡಿಸಲಾಗುತ್ತಿದೆ.
Facebook Comments