ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ಅಂತೆ…?!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.5-ಸಿ.ಡಿ ಪ್ರಕರಣದಲ್ಲಿ ಸಿಲುಕಿ ಬಂಧನದ ಭೀತಿ ಎದುರಿಸುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆಯಂತೆ..! ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಇದನ್ನು ಖಚಿತಪಡಿಸಿದ್ದು, ರಮೇಶ್ ಜಾರಕಿಹೊಳಿಗೆ ಕೊರೊನಾ ಧೃಢಪಟ್ಟಿರುವುದರಿಂದ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರದಿಂದ ದೂರ ಉಳಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ನಿನ್ನೆ ರಮೇಶ್ ಜಾರಕಿಹೊಳಿಗೆ ದೂರವಾಣಿ ಕರೆ ಮಾಡಿದ್ದ ವೇಳೆ, ತಮಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಎಸ್‍ಐಟಿ ವಿಚಾರಣೆಗೂ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಆರೋಗ್ಯ ಸುಧಾರಿಸಿದ ನಂತರ ತನಿಖಾಧಿಕಾರಿಗಳ ಮುಂದೆ ಹಾಜರಾಗುವುದಾಗಿ ಹೇಳಿಕೊಂಡರೆಂದು ಸ್ಪಷ್ಟಪಡಿಸಿದ್ದಾರೆ.

ಇದೀಗ ಬೆಳಗಾವಿ ಲೋಕಸಭಾ ಚುನಾವಣೆ ಪ್ರಚಾರದಿಂದ ರಮೇಶ್ ಜಾರಕಿಹೊಳಿ ಸಂಪೂರ್ಣವಾಗಿ ದೂರ ಉಳಿಯಲಿದ್ದಾರೆ. ಸಿ.ಡಿ ಪ್ರಕರಣ ಸಂಬಂಧ ಎಸ್‍ಐಟಿ ಈಗಾಗಲೇ ಎರಡು ಬಾರಿ ನೋಟಿಸ್ ನೀಡಿದ್ದರೂ ಹಾಜರಾಗಿರಲಿಲ್ಲ. ಈಗ ಸೋಂಕು ದೃಢಪಟ್ಟಿರುವುದರಿಂದ ಅವರು ಸುಮಾರು 10 ದಿನಗಳವರೆಗೂ ಹೋಮ್‍ಕ್ವಾರಂಟೈನ್‍ಗೆ ಒಳಗಾಗುವ ಸಾಧ್ಯತೆಯಿದೆ.

Facebook Comments