ರಮೇಶ್ ಜಾರಕಿಹೊಳಿ ಉಚ್ಛಾಟನೆಗೆ ಸತೀಶ್ ಆಗ್ರಹ..!?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.3- ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕೆಂದು ಸಹೋದರ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ರಮೇಶ್ ಜಾರಕಿಹೊಳಿ ನಡೆಯಿಂದ ಪಕ್ಷದ ವರ್ಚಸ್ಸಿಗೆ ಹಾಗೂ ತಮಗೂ ಡ್ಯಾಮೇಜ್ ಆಗತ್ತಿದೆ. ಬಹಿರಂಗವಾಗಿಯೇ ಅವರು, ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಇದನ್ನು ನೋಡಿಕೊಂಡು ಎಷ್ಟು ದಿನ ಸುಮ್ಮನಿರಲು ಸಾಧ್ಯ? ತಕ್ಷಣವೇ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಯಾವುದೇ ಕಾರಣಕ್ಕೂ ರಮೇಶ್ ಜಾರಕಿಹೊಳಿ ಮನವೊಲಿಸುವ ಪ್ರಶ್ನೆಯೇ ಇಲ್ಲ ಎನ್ನುವ ಮೂಲಕ ಸಹೋದರನ ವಿರುದ್ಧವೇ ಸತೀಶ್ ಜಾರಕಿಹೊಳಿ ಗರಂ ಆಗಿದ್ದಾರೆ. ಇದರೊಂದಿಗೆ ಬೆಳಗಾವಿ ಕಾಂಗ್ರೆಸ್ ನಲ್ಲಿ ಸೋದರರ ಜಟಾಪಟಿ ಮುಂದುವರೆಯುವ ಸಾಧ್ಯತೆ ಇದೆ.

ಗೋಕಾಕ್ ಕ್ಷೇತ್ರದಲ್ಲಿ ಮತ್ತೊಬ್ಬ ಸಹೋದರ ಲಖನ್ ಜಾರಕಿಹೊಳಿ ಅವರನ್ನು ಅಭ್ಯರ್ಥಿಯಂತೆ ಸತೀಶ್ ಜಾರಕಿಹೊಳಿ ಬಿಂಬಿಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕಾರವಾಗಿ ಉಪ ಚುನಾವಣೆ ನಡೆದರೆ, ಲಖನ್ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin