ಮೇಕೆದಾಟು ಯೋಜನೆ ; ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಚಿವ ರಮೇಶ್ ಜಾರಕಿಹೊಳಿ‌

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ : ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದರು.

ನವದೆಹಲಿಯ ಜಲಶಕ್ತಿ ಮಂತ್ರಾಲಯದಲ್ಲಿ ನಡೆದ ಈ ಭೇಟಿಯ ವೇಳೆ, ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಕೇಂದ್ರ ಸಚಿವರನ್ನು ಒತ್ತಾಯಿಸಿದರು.  ಹಾಗೆಯೇ ಕೃಷ್ಣ ನದಿ ನೀರು ಹಂಚಿಕೆ ಮತ್ತು ಆಲಮಟ್ಟಿ ಅಣೆಕಟ್ಟೆ ಎತ್ತರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವಂತೆಯೂ ಮನವಿ‌ ಮಾಡಿದರು.

ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಸಚಿವ ರಮೇಶ್ ಜಾರಕಿಹೊಳಿ‌, ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಯನ್ನಾಗಿ ಘೋಷಿಸುವಂತೆ ಶೇಖಾವತ್ ಅವರಿಗೆ ಒತ್ತಾಯಿಸಿದರು.

ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ‌ಕಾವೇರಿ ನೀರಾವರಿ ನಿಗಮದ ‌ಎಂಡಿ ಜೈಪ್ರಕಾಶ್ ಉಪಸ್ಥಿತರಿದ್ದರು.

Facebook Comments

Sri Raghav

Admin