ರಮೇಶ್ ಜಾರಕಿಹೊಳಿಯವರನ್ನು ಇನ್ನು ಏಕೆ ಬಂಧಿಸಿಲ್ಲ..? : ವಕೀಲ ಜಗದೀಶ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.27- ಸಿಡಿ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿರುವ ಯುವತಿ ಪರ ವಕೀಲ ಜಗದೀಶ್ ಅವರು, ನ್ಯಾಯಾಲಯದ ಉಸ್ತುವಾರಿಯಲ್ಲಿ ತನಿಖೆ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ.

ಇಂದು ಬೆಳಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿರುವ ಅವರು, ಯುವತಿಯ ಹೇಳಿಕೆ ಆಧರಿಸಿ ನಿನ್ನೆ ರಮೇಶ್ ಜಾರಕಿಹೊಳಿ ಅವರ ಮೇಲೆ ಅತ್ಯಾಚಾರ ಆರೋಪದ ಅಡಿ ಎಫ್‍ಐಆರ್ ದಾಖಲಾಗಿದೆ. ಸಾಮಾನ್ಯ ವ್ಯಕ್ತಿಯ ಮೇಲೆ ಅತ್ಯಾಚಾರದಂತಹ ಗಂಭೀರ ದೂರು ದಾಖಲಾಗಿದ್ದರೆ ಪೊಲೀಸರು ಸುಮ್ಮನಿರುತ್ತಿದ್ದರೆ. ಮುಖಕ್ಕೆ ಮಾಸ್ಕ್ ಹಾಕಿ, ಲಾಠಿ ಪ್ರಯೋಗಿಸಿ ಬಂಧಿಸುತ್ತಿದ್ದರು. ಆದರೆ ರಮೇಶ್ ಜಾರಕಿಹೊಳಿಯವರನ್ನು ಯಾಕೆ ಬಂಧಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಎಫ್‍ಐಆರ್ ದಾಖಲಾದ ಬಳಿಕ ರಮೇಶ್ ಜಾರಕಿಹೊಳಿ ಬಹಿರಂಗವಾಗಿ ಓಡಾಡಿಕೊಂಡಿದ್ದಾರೆ. ಮಾಧ್ಯಮಗಳ ಮೂಲಕ ಸರ್ಕಾರಕ್ಕೆ ಬೆದರಿಕೆ ಹಾಕುತ್ತಿದ್ದಾರೆ. ನನ್ನನ್ನು ಬಂಧಿಸಲು ಬಂದರೆ ಸರ್ಕಾರವನ್ನೇ ಪತನ ಮಾಡುವುದಾಗಿ ಹೇಳುತ್ತಿದ್ದಾರೆ. ಸರ್ಕಾರಕ್ಕೆ ಬೆದರಿಕೆ ಹಾಕುವ ವ್ಯಕ್ತಿಯ ವಿರುದ್ಧ ಸರ್ಕಾರದ ಅಧೀನದಲ್ಲಿರುವ ವಿಶೇಷ ತನಿಖಾ ದಳದಿಂದ ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವಿಲ್ಲ ಎಂದಿದ್ದಾರೆ.

ಹಾಗಾಗಿ ನಾವು ಹೈಕೋರ್ಟ್ ಮೊರೆ ಹೋಗುತ್ತಿದ್ದು, ಎಸ್‍ಐಟಿ ತನಿಖೆ ನ್ಯಾಯಾಲಯದ ಉಸ್ತುವಾರಿಯಲ್ಲಿ ನಡೆಯಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದರು. ಆರೋಪಿ ಮಾಧ್ಯಮಗಳ ಮೂಲಕ ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ದೂರುದಾರರನ್ನು ಬೆದರಿಸುತ್ತಿದ್ದಾರೆ. ಸಾಕ್ಷ್ಯ ನಾಶ ಪಡಿಸುವ ಸಾಧ್ಯತೆ ಇದೆ. ಯುವತಿ ನಮ್ಮ ಜವಾಬ್ದಾರಿಯ ಮೇಲೆ ಹೊರಗೆ ಬರುವುದಾಗಿ ಹೇಳಿದ್ದಳು. ಆದರೆ ಆರೋಪಿಯನ್ನು ಬಂಧಿಸದಿದ್ದರೆ ನ್ಯಾಯಾ ಸಿಗಲ್ಲ ಎಂದು ಹೇಳಿದರು.

Facebook Comments