ಸಾವುಕಾರ್ ಸರಸದ ಸಿಡಿ ಹಿಂದೆ ಕನಕಪುರ-ಬೆಳಗಾವಿ ಮೂಲದವರ ಕೈವಾಡ..!?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮಾ.6- ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮೇಲಿನ ಆರೋಪದ ವಿಚಾರದಲ್ಲಿ ರಾಜಕೀಯ ಷಡ್ಯಂತ್ರವಿದ್ದು, ಕನಕಪುರ ಮತ್ತು ಬೆಳಗಾವಿ ಕಡೆಯವರು ಮಾಡಿದ್ದಾರೆ ಎಂದು ಪರಿಸರ ಜೀವಶಾಸ್ತ್ರ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಷಡ್ಯಂತ್ರ ಮಾಡಿದವರು ಮುಂದಿನ ದಿನಗಳಲ್ಲಿ ಅನುಭವಿಸುತ್ತಾರೆ ಎಂದಷ್ಟೇ ಹೇಳಿದರು.  ಅನಾವಶ್ಯಕವಾಗಿ ತಮಗೆ ಸಂಬಂಧವಿಲ್ಲದ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ.

ಬಿಜೆಪಿ ಸರ್ಕಾರ ರಚನೆ ಸಂದರ್ಭದಲ್ಲಿ 20 ಜನರಿದ್ದರು. ಕೆಲವು ಸಚಿವರು ನ್ಯಾಯಾಲಯದ ಮೊರೆ ಹೋಗಿರುವುದು ಅವರ ವೈಯಕ್ತಿಕ ವಿಚಾರ. ಸಾಮೂಹಿಕ ವಿಚಾರವಲ್ಲ ಎಂದು ಸ್ಪಷ್ಟಪಡಿಸಿದರು.

ನ್ಯಾಯಾಲಯಕ್ಕೆ ಏಕೆ ಹೋಗಿದ್ದಾರೆ? ಎಂಬುದಕ್ಕೆ ತಮ್ಮ ಬಳಿ ಉತ್ತರವಿಲ್ಲ. ಯಾರು ನ್ಯಾಯಾಲಯದ ಮೊರೆ ಹೋಗಿದ್ದಾರೋ ಅವರನ್ನೇ ಕೇಳಬೇಕು ಎಂದು ಹೇಳಿದರು.

Facebook Comments

Sri Raghav

Admin