ಸುಪ್ರೀಂ ತೀರ್ಪಿನ ಬಗ್ಗೆ ಭಯವಿಲ್ಲ : ಅನರ್ಹ ಶಾಸಕ ರಮೇಶ್ ಜಾರಕಿಹೊಳಿ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ನ.8- ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ನನಗೆ ಯಾವುದೇ ಭಯವಿಲ್ಲ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ಚಾಮುಂಡಿಬೆಟ್ಟಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ  ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಸುಪ್ರೀಂಕೋರ್ಟ್ ತೀರ್ಪು ನಮ್ಮ ಪರವಾಗಿ ಬರುವ ವಿಶ್ವಾಸವಿದೆ. ತೀರ್ಪು ಏನಾದರೂ ಬರಲಿ ಚುನಾವಣೆಗೆ ಸ್ಪರ್ಧಿಸುವ ಅವಕಾಶ ಸಿಕ್ಕರೆ ಸಾಕು ಎಂದು ಹೇಳಿದರು. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕುರಿತು ಕೇಳಿದ ಪ್ರಶ್ನೆಗೆ ನೋ ಕಾಮೆಂಟ್ ಎಂದು ಹೇಳಿ ಚಾಮುಂಡೇಶ್ವರಿ ದೇವಿಯು ಅವರಿಗೂ ಒಳ್ಳೆಯದು ಮಾಡಲಿ ಎಂದು ತಿಳಿಸಿದರು.

ನಾನು ನಮ್ಮ ಊರಿನಲ್ಲಿದ್ದಿದ್ದರೆ ಸೊಲ್ಲಾಪುರದ ಮಹಾಲಕ್ಷ್ಮಿ ದೇವಾಲಯಕ್ಕೆ ಹೋಗುತ್ತಿದ್ದೆ. ಇಂದು ಮೈಸೂರಿನಲ್ಲಿರುವುದರಿಂದ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮತ್ತೊಬ್ಬ ಅನರ್ಹ ಶಾಸಕ ಮಹೇಶ್ ಕಮಟಳ್ಳಿ ಸಹ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

Facebook Comments