ನೀರಾವರಿ ಸೌಲಭ್ಯ ವಿಸ್ತರಣೆಗೆ ಸರ್ಕಾರ ಬದ್ಧ : ಸಚಿವ ರಮೇಶ್ ಜಾರಕಿಹೊಳಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ, ಮಾ.8- ರಾಜ್ಯದ ಮೂಲೆ ಮೂಲೆಗೂ ನೀರಾವರಿ ಸೌಲಭ್ಯ ಒದಗಿಸಲು ಸರ್ಕಾರ ಬದ್ಧವಿದೆ. ಅದೇ ರೀತಿ ಬೆಳಗಾವಿ ಜಿಲ್ಲಾಯಲ್ಲಿ ಕೃಷ್ಣಾ ಮತ್ತು ಅದರ ಉಪ ನದಿಗಳಿಗೆ ಎಷ್ಟು ಸಾಧ್ಯವೋ ಅಷ್ಟು ಗರಿಷ್ಠ ಪ್ರಮಾಣದಲ್ಲಿ ಬ್ಯಾರೇಜ್ ನಿರ್ಮಿಸಲಾಗುವುದು ಎಂದು ಜಲಸಂಪನ್ಮೂಲ ಇಲಾಖೆ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಜಲ ಸಂಪನ್ಮೂಲ ಇಲಾಖೆ ಹಾಗೂ ನೀರಾವರಿ ನಿಗಮ ನಿಯಮಿತ ವತಿಯಿಂದ ಬೆಳಗಾವಿ ಲ್ಲಾಯ ರಾಯಬಾಗ ತಾಲೂಕಿನ ಜಲಾಲಪೂರ- ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮಗಳ ಮಧ್ಯದಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ 33 ಕೋಟಿ ರೂ.ವೆಚ್ಚದ ಬ್ರಿಡ್ಜ್ ಕಂ ಬ್ಯಾರೆಜ್ ನಿರ್ಮಾಣಕ್ಕೆ ರಾಯಬಾಗ ತಾಲೂಕಿನ ದಿಗ್ಗೆವಾಡಿಯಲ್ಲಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ನೀರಾವರಿ ಇಲಾಖೆಗೆ ಯಾವುದೇ ಜಾತಿ, ಪಕ್ಷ ಇಲ್ಲ; ಎಲ್ಲ ರೈತರು ಮತ್ತು ಜನರಿಗೆ ನೀರು ನೀಡುವುದು ನಮ್ಮ ಕೆಲಸ. ಕೃಷ್ಣಾ ಮತ್ತು ಅದರ ಉಪನದಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾರೇಜ್ ನಿರ್ಮಿಸಲು ಎಷ್ಟೇ ಖರ್ಚಾದರೂ ನೀಡಲು ಸಿದ್ಧ ಎಂದು ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದರು. ಜಿಲ್ಲಾಗೆ ಸಂಬಂಧಿಸಿದಂತೆ ಈಗಾಗಲೇ ಎರಡು ಸಭೆಗಳನ್ನು ಮಾಡಿ ಜಿಲ್ಲಾಯ ಎಲ್ಲ 18 ಕ್ಷೇತ್ರಗಳಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ನೀರಾವರಿ ಮಾಡುವ ಕನಸು ಅನೇಕ ವರ್ಷಗಳ ಹಿಂದಿನದು. ಶಾಸಕನಾದಾಗಿನಿಂದಲೂ ನೀರಾವರಿಗೆ ಆದ್ಯತೆ ನೀಡಿರುತ್ತೇನೆ. ಮುಂದಿನ ಮೂರು ವರ್ಷಗಳ ಕಾಲ ಇನ್ನೂ ಹೆಚ್ಚಿನ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ಜಿಲ್ಲಾಯಲ್ಲಿ ಎಷ್ಟು ಸಾಧ್ಯವೋ ಅಷ್ಟು ಬ್ಯಾರೇಜ್ ನಿರ್ಮಾಣಕ್ಕೆ ಯೋಜನೆ ರೂಪಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರೈತಪರ ಕೆಲಸ ಮಾಡಲು ಎಲ್ಲರೂ ಪಕ್ಷಾತೀತವಾಗಿ ಸಹಕಾರ ನೀಡಬೇಕು ಎಂದು ಹೇಳಿದರು.

ಆಲಮಟ್ಟಿ ಎತ್ತರ ಹೆಚ್ಚಿಸಲು ಹಾಗೂ ಪುನರ್ವಸತಿ ಗೆ ಸಾವಿರಾರು ಕೋಟಿ ಅಗತ್ಯವಿದ್ದು, ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ನೀರಾವರಿ ಯೋಜನೆ ಪೂರ್ಣಗೊಳಿಸಲು ಡಾ.ಪ್ರಭಾರ್ಕ ಕೋರೆ ನೇತೃತ್ವದಲ್ಲಿ ತಂಡವಾಗಿ ಕೆಲಸ ಮಾಡುವುದಾಗಿ ಸಚಿವ ಜಾರಕಿಹೊಳಿ ಭರವಸೆ ನೀಡಿದರು. ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ ಮಾತನಾಡಿ, 20 ವರ್ಷಗಳ ಕನಸು ಇದೀಗ ಈಡೇರುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಬೇಸಿಗೆ ಕಾಲದಲ್ಲಿ ಪ್ರತಿವರ್ಷ ಮಹಾರಾಷ್ಟ್ರಕ್ಕೆ ನೀರಿಗಾಗಿ ಮನವಿ ಮಾಡಿಕೊಳ್ಳುವ ಪರಿಸ್ಥಿತಿ ಇದೆ. ಈ ಭಾಗದವರೇ ಜಲಸಂಪನ್ಮೂಲ ಇಲಾಖೆಯ ಸಚಿವರಾಗಿರುವುದರಿಂದ ಜಿಲ್ಲಾಯಲ್ಲಿ ಇನ್ನೂ ಹೆಚ್ಚಿನ ಪ್ರಮಾಣದ ನೀರಾವರಿ ಯೋಜನೆ ಅನುಷ್ಠಾನಗೊಳಿಸಬೇಕು ಈಗಾಗಲೇ ಸ್ಥಗಿತಗೊಂಡಿರುವ ಯೋಜನೆ ಪೂರ್ಣಗೊಳಿಸುವ ಮೂಲಕ ರೈತರಿಗೆ ನೆರವಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಮಾತನಾಡಿ, ಸಪ್ತನದಿಗಳ ಲ್ಲಾಯಾಗಿರುವ ಬೆಳಗಾವಿಯಲ್ಲಿ ಬೇಸಿಗೆ ಕಾಲದಲ್ಲಿ ನೀರಿಗಾಗಿ ಪರಿತಪಿಸುವ ಪರಿಸ್ಥಿತಿಯಿದೆ. ಆದ್ದರಿಂದ ಮಳೆಗಾಲದಲ್ಲಿ ಹರಿಯುವ ನೀರು ಹಿಡಿದಿಡಲು ಮಹಾರಾಷ್ಟ್ರದ ಮಾದರಿಯಲ್ಲಿ ಪ್ರತಿ ಐದು ಅಥವಾ ಹತ್ತು ಕಿಲೋಮೀರ್ಟ ಗೆ ಒಂದು ಬಾಂದಾರ ನಿರ್ಮಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಹೆಚ್ಚು ಹೆಚ್ಚು ಬ್ಯಾರೇಜ್ ನಿರ್ಮಿಸಿ ಜಿಲ್ಲಾಯ ರೈತರಿಗೆ ನೀರು ಒದಗಿಸುವ ಕೆಲಸವಾಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರದಿಂದ ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು. ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಮಾತನಾಡಿ, ತಮ್ಮ ಮತಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ನೀರಾವರಿ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿಕೊಂಡರು. ಯೋಜನೆ ಕುರಿತು ಮಾಹಿತಿ ನೀಡಿದ ಕರ್ನಾಟಕ ನೀರಾವರಿ ನಿಗಮದ (ಉತ್ತರ ವಲಯ) ಮುಖ್ಯ ಎಂಜಿನಿಯರ್ ಅರವಿಂದ ಕಣಗಿಲ, ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವುದಾಗಿ ತಿಳಿಸಿದರು.

Facebook Comments