“ಸಮಗ್ರ ಸಂಪುಟ ಪುನಾರಚನೆ” : ಹೊಸ ಬಾಂಬ್ ಸಿಡಿಸಿದ ಸಚಿವ ರಮೇಶ್ ಜಾರಕಿಹೊಳಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ, ಜ.13- ರಾಜ್ಯ ಸಚಿವ ಸಂಪುಟ ಪುನಾರಚನೆಯಾಗಲಿದೆ ಎಂಬ ಸುಳಿವನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನೀಡಿದ್ದಾರೆ. ಬಹು ನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿರುವ ಬೆನ್ನಲ್ಲೇ ಜಲಸಂಪನ್ಮೂಲ ಸಚಿವರು ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದೆ. ಇಂದು ಸಚಿವ ಸಂಪುಟ ವಿಸ್ತರಣೆಯಾದರೂ ಮತ್ತೆ ಸಚಿವ ಸಂಪುಟ ಪುನಾರಚನೆಯಾಗಲಿದ್ದು, ಆ ಸಂದರ್ಭದಲ್ಲಿ ಕೆಲವರು ಸಚಿವ ಸ್ಥಾನ ಕಳೆದುಕೊಂಡರೆ ಮತ್ತೆ ಕೆಲವರು ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ.

ಮೂರ್ನಾಲ್ಕು ತಿಂಗಳಲ್ಲಿ ರಾಜ್ಯ ಸಚಿವ ಸಂಪುಟ ಸಮಗ್ರ ಪುನಾರಚನೆಯಾಗಲಿದೆ ಎಂದು ಸಚಿವ ಜಾರಕಿಹೊಳಿ ಹೇಳಿದ್ದಾರೆ. ಹೀಗಾಗಿ ಮುಂದಿನ ಜೂನ್ ವೇಳೆಗೆ ಮತ್ತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಂಪುಟ ಪುನಾರಚನೆಯಾಗಲಿದೆ. ಈಗ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವವರಿಗೆ ಆ ಸಂದರ್ಭದಲ್ಲಿ ಸಚಿವ ಸ್ಥಾನ ಸಿಗುವ ಸಾಧ್ಯತೆಗಳಿವೆ.

ಈಗಾಗಲೇ ಸಚಿವರಾಗಿರುವವರ ಕಾರ್ಯವೈಖರಿ ತೃಪ್ತಿಕರವಾಗದಿದ್ದರೆ ಅವರನ್ನು ಸಂಪುಟದಿಂದ ಕೈಬಿಡುವ ಸಂಭವವಿದೆ. ಕೆಲವರ ಖಾತೆಗಳು ಕೂಡ ಬದಲಾಗಬಹುದು. ಹೀಗಾಗಿ ಸಂಪುಟ ವಿಸ್ತರಣೆಯಾದರೂ ಪುನಾರಚನೆ ವಿಚಾರ ಮತ್ತೆ ಚರ್ಚೆಗೆ ಗ್ರಾಸ ನೀಡಿದಂತಾಗಿದೆ.

Facebook Comments