ಕೇಂದ್ರದ ಅನುಮತಿ ಬಳಿಕ ಮೇಕೆದಾಟು ಅಣೆಕಟ್ಟು ನಿರ್ಮಾಣ : ರಮೇಶ್ ಜಾರಕಿಹೊಳಿ

ಈ ಸುದ್ದಿಯನ್ನು ಶೇರ್ ಮಾಡಿ

ರಾಮನಗರ, ಸೆ. 15- ಪ್ರಸ್ತಾಪಿತ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ 9000 ಕೋಟಿ ರೂ.ಗಳ ವೆಚ್ಚದ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಅನುಮೋದನೆ ದೊರೆತ ಬಳಿಕ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ತಿಳಿಸಿದರು.

ಯೋಜನೆಗೆ ಸಂಬಂಸಿದಂತೆ ಅರ್ಕಾವತಿ ಮತ್ತು ಕಾವೇರಿ ಸೇರುವ ಸಂಗಮ ಹಾಗೂ ಜಲಾಶಯ ನಿರ್ಮಿಸಲಾಗುವ ಉದ್ದೇಶಿತ ಒಂಟಿಗುಂಡ್ಲು ಪ್ರದೇಶಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲಿಸಿದ ಬಳಿಕ ಮಾತನಾಡಿದ ಸಚಿವರು, ಅಣೆಕಟ್ಟು ನಿರ್ಮಾಣವಾಗುವುದರಿಂದ ಸುಮಾರು 5051 ಹೆಕ್ಟೇರ್ ಅರಣ್ಯ ಭೂಮಿ ಮುಳುಗಡೆಯಾಗಲಿದೆ.

ಈ ಯೋಜನೆಗಾಗಿ ಒಟ್ಟಾರೆಯಾಗಿ 5252 ಹೆಕ್ಟೇರ್ ಪ್ರದೇಶದ ಅವಶ್ಯಕತೆ ಇದೆ. ಇದರಲ್ಲಿ 3181 ಹೆಕ್ಟೇರ್ ವನ್ಯಜೀವಿ ಪ್ರದೇಶವಾಗಿದೆ. 1870 ಹೆಕ್ಟೇರ್‍ಮೀಸಲು ಅರಣ್ಯ ಪ್ರದೇಶವಾಗಿದ್ದರೆ, 201 ಹೆಕ್ಟೇರ್ ಕಂದಾಯ ಪ್ರದೇಶವಾಗಿರುತ್ತದೆ. ಈ ಪೈಕಿ ಶೇ. 63ರಷ್ಟು ಪ್ರದೇಶ ವನ್ಯಜೀವಿ ಪ್ರದೇಶವಾಗಿರುವುದರಿಂದ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮೋದನೆ ಪಡೆದುಕೊಳ್ಳುವುದು ಅಗತ್ಯವಾಗಿದೆ ಎಂದರು.

ಪ್ರಸ್ತಾಪಿತ ಜಲಾಶಯಕ್ಕಾಗಿ ಈಗಾಗಲೇ ಪರಿಷ್ಕøತ ವಿಸ್ತ್ರತ ಯೋಜನಾ ವರದಿಯನ್ನು ಸಿದ್ದಪಡಿ 2019ರ ಜನವರಿ ತಿಂಗಳಲ್ಲಿ ಕೇಂದ್ರಕ್ಕೆ ಸಲ್ಲಿಸಲಾಗಿತ್ತು. ಇದಕ್ಕೆ ಕೇಂದ್ರದ ಜಲ ಆಯೋಗದ ವಿವಿಧ ನಿರ್ದೇಶನಾಲಯಗಳಲ್ಲಿ ಪರಿಶೀಲನೆಯಲ್ಲಿದ್ದು, ಅನುಮೋದನೆ ದೊರೆತ ತಕ್ಷಣವೆ ಡಿಪಿಆರ್ ಅನ್ನು ಸಚಿವ ಸಂಪುಟದ ಮುಂದಿರಿಸಿ, ಅನುಮೋದನೆ ಪಡೆದುಕೊಂಡ ಬಳಿಕ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಜಾರಕಿಹೊಳಿ ಅವರು ತಿಳಿಸಿದರು.

ದೆಹಲಿ ಭೇಟಿ: ಅಣೆಕಟ್ಟು ನಿರ್ಮಾಣಕ್ಕಾಗಿ ಈಗಾಗಲೆ 2019ರ ನವೆಂಬರ್ ಮತ್ತು ಕಳೆದ ಜುಲೈ 14ರಂದು ಕೇಂದ್ರದ ಜಲಶಕ್ತಿ ಸಚಿವರನ್ನು ಖುದ್ದು ಭೇಟಿ ಮಾಡಿ ಚರ್ಚಿಸಲಾಗಿದೆ. ನಾಳೆ ಇಲ್ಲವೆ ಗುರುವಾರ ಮತ್ತೊಮ್ಮೆ ಪರಿಸರ ಸಚಿವರನ್ನು ಭೇಟಿ ಮಾಡಿ ಯೋಜನೆಯ ಅಗತ್ಯತೆಯನ್ನು ಮನವರಿಕೆ ಮಾಡಿಕೊಟ್ಟು ಅನುಮೋದನೆ ಪಡೆದುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಮೇಕೆದಾಟು ಜಲಾಶಯಕ್ಕೆ ಭೇಟಿನೀಡಿ ಪರಿಶೀಲಿಸಿದ ಬಳಿಕ ಮತ್ತಷ್ಟು ವಾಸ್ತವಾಂಶಗಳ ಸಹಿತ ದೆಹಲಿಗೆ ತೆರಳಿ ಕೇಂದ್ರದ ಪರಿಸರ ಸಚಿವರಿಗೆ ಮನವರಿಕೆ ಮಾಡಿಕೊಡುವುದರ ಜೊತೆಗೆ, ಅಗತ್ಯ ಬಿದ್ದರೆ ಕೇಂದ್ರದ ಮೇಲೆ ಮತ್ತಷ್ಟು ಒತ್ತಡ ಹೇರಿ ಶೀಘ್ರ ಅನುಮೋದನೆಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಿಯೋಗವನ್ನು ದೆಹಲಿಗೆ ಕರೆದುಕೊಂಡು ಹೋಗುವ ಬಗ್ಗೆಯೂ ಚಿಂತನೆ ನಡೆಸಿರುವುದಾಗಿ ತಿಳಿಸಿದರು.

ವ್ಯರ್ಥವಾಗಿ ಹರಿದು ಹೋಗುತ್ತಿದ್ದ ಕಾವೇರಿ ನದಿ ನೀರನ್ನು ಸದ್ಭಳಕೆ ಮಾಡಿಕೊಳ್ಳುವ ಉದ್ದೇಶದಿಂದ ಇಲ್ಲಿ ಅಣೆಕಟ್ಟು ನಿರ್ಮಿಸುವ ಉದ್ದೇಶವನ್ನು ಹೊಂದಲಾಗಿದೆ. ಸಮಗ್ರ ಕುಡಿಯುವ ನೀರಿನ ಯೋಜನೆಗಾಗಿ ಅರ್ಕಾವತಿ ಮತ್ತು ಕಾವೇರಿ ನದಿಯ ಸಂಗಮದ ಸಮೀಪದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಸಮತೋಲನ ಜಲಾಶಯವನ್ನು ನಿರ್ಮಿಸಲಾಗುತ್ತಿದೆ. ಭವಿಷ್ಯದಲ್ಲಿ ಬೆಂಗಳೂರು ನಗರಕ್ಕೆ ಇಲ್ಲಿಂದ ಕುಡಿಯುವ ನೀರನ್ನು ಪೂರೈಸಲಾಗುವುದು ಎಂದರು.

ಸು. 441.20 ಮೀಟರ್ ಎತ್ತರ ಹಾಗೂ ಸು. 674.5 ಮೀಟರï ನಷ್ಟು ಅಗಲವಿರುವ ಈ ಉದ್ದೇಶಿತ ಅಣೆಕಟ್ಟೆಯಲ್ಲಿ 67.16 ಟಿಎಂಸಿ ನೀರನ್ನು ಶೇಖರಿಸಿಟ್ಡುಕೊಳ್ಳುವ ಸಾಮಥ್ರ್ಯ ಹೊಂದಿರುತ್ತದೆ. 17 ಕ್ರ¸್ಟï ಗೇಟï ಹೊಂದಿರುವ ಜಲಾಶಯದಲ್ಲಿ 7.7 ಟಿಎಂಸಿಯಷ್ಟು ನೀರು ಡೆಡ್ ಸ್ಟೊರೇಜï ನಲ್ಲಿ ಸಂಗ್ರಹವಾಗಿರುತ್ತದೆ.

ಒಂಟಿಗುಂಡ್ಲುವಿನಿಂದ 3.5. ಕಿ.ಮೀ ದೂರದಲ್ಲಿ ತಮಿಳುನಾಡಿಗೆ ಬಿಡುವ ನೀರಿನಿಂದ ಸುಮಾರು 400 ಮೆಗಾ ವಾಟï ವಿದ್ಯುತ್ ಉತ್ಪಾದಿಸುವ ಉದ್ದೇಶವಿದೆ. ಇಂಧನ ಇಲಾಖೆಯ ವತಿಯಿಂದ ಇಲ್ಲಿ ವಿದ್ಯುತ್ ಘಟಕವನ್ನು ಸ್ಥಾಪಿಸಲಾಗುವುದು ಎಂದು ಸಚಿವರು ಯೋಜನೆಯ ರೂಪುರೇಷೆಗಳನ್ನು ವಿವರಿಸಿದರು.

ವಿಧಾನಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಯಪ್ರಕಾಶ್, ಮುಖ್ಯ ಇಂಜಿನಿಯರ್ ಶಂಕ್ರರೇಗೌಡ, ಸೂಪರಿಂಟೆಂಡ್ ಇಂಜಿನಿಯರ್ ವಿಜಯï ಕುಮಾರ್, ಮತ್ತು ಕಾರ್ಯನಿರ್ವಾಹಕ ಇಂಜಿನಿಯರ್ ವಂಕಟೇಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.

Facebook Comments

Sri Raghav

Admin