BIG BREAKING : ರಾಸಲೀಲೆ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.7- ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರು ನೀಡಿದ್ದ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಇಂದು ಯು ಟರ್ನ್ ಪಡೆದಿದ್ದು , ತಮ್ಮ ದೂರನ್ನು ವಾಪಸ್ ಪಡೆಯುವುದಾಗಿ ಹೇಳಿದ್ದಾರೆ.

ಕಳೆದ ಆರು ದಿನಗಳಿಂದ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿ, ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಪ್ರಕರಣವೀಗ ಮಹತ್ವದ ತಿರುವು ಪಡೆದುಕೊಂಡಿದೆ. ರಾಸಲೀಲೆ ಸಿಡಿಯೊಂದಿಗೆ ಪೊಲೀಸ್ ಆಯುಕ್ತರಿಗೆ ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದು, ಇದು ಭಾರೀ ಸಂಚಲನ ಸೃಷ್ಟಿಸಿತ್ತು. ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದರು.

ದೂರು ಆದರಿಸಿ ವಿಚಾರಣೆ ಕೈಗೆತ್ತಿಕೊಂಡ ಪೊಲೀಸರು ದಿನೇಶ್ ಕಲ್ಲಹಳ್ಳಿ ಅವರಿಗೆ ನೋಟೀಸ್ ನೀಡಿ ಮಾಹಿತಿ ಪಡೆದಿದ್ದರು. ಆದರೆ ಸಿಡಿಯಲ್ಲಿ ಕಾಣಿಸಿಕೊಂಡಿರುವ ಯುವತಿಯ ಸುಳಿವು ಸಿಕ್ಕಿರಲಿಲ್ಲ. ಆಕೆಯ ಹೇಳಿಕೆ ದಾಖಲಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ.
ಈ ನಡುವೆ ಸಂಘಟನೆಯೊಂದು ದಿನೇಶ್ ಕಲ್ಲಹಳ್ಳಿ ವಿರುದ್ಧ ದೂರು ನೀಡಿ ಸಚಿವರ ತೇಜೋವಧೆಗೆ ಷಡ್ಯಂತ್ರ ಮಾಡಿದ್ದಾರೆ ಎಂದು ಆರೋಪಿಸಿತ್ತು. 

ಯುವತಿ ಪತ್ತೆಯಾಗದ ಹಿನ್ನೆಲೆಯಲ್ಲಿ ದಿನೇಶ್ ಕಲ್ಲಹಳ್ಳಿ ಇಕ್ಕಟ್ಟಿಗೆ ಸಿಲುಕಿದ್ದರು. ಇಂದು ತಮ್ಮ ವಕೀಲರ ಮೂಲಕ ಪೊಲೀಸರಿಗೆ ಪತ್ರ ರವಾನೆ ಮಾಡಿದ್ದಾರೆ. ಅದರಲ್ಲಿ ದೂರು ಹಿಂಪಡೆಯುವುದಾಗಿ ತಿಳಿಸಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ. ದೂರಿನಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳಿವೆ ಅದಕ್ಕಾಗಿ ತಮ್ಮ ಕಕ್ಷಿದಾರರು ದೂರನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ಆಗಿದೆ ಎಂದು ಆರೋಪಿಸಿದ್ದಾರೆ. ಇದರಿಂದ ನನಗೆ ತುಂಬಾ ನೋವಾಗಿದೆ. ನಾನು ಈ ಆರೋಪದಿಂದ ಮುಕ್ತನಾಗಬೇಕು. ಅದಕ್ಕಾಗಿ ದೂರು ಹಿಂಪಡೆಯುತ್ತಿದ್ದೇನೆ ಎಂದಿದ್ದಾರೆ.

ಸಾಮಾಜಿಕ ಹೋರಾಟ ಮಾಡುವ ನನ್ನಂತಹವರನ್ನು ಬಾಯಿ ಮುಚ್ಚಿಸುವ ಹುನ್ನಾರವಿದು ಎಂದು ಆರೋಪಿಸಿದ್ದಾರೆ.

Facebook Comments

Sri Raghav

Admin