ಸುಪ್ರೀಂ ಸೂಚನೆಯಂತೆ ರಾಜೀನಾಮೆ ಪರಿಶೀಲನೆ : ಸ್ಪೀಕರ್ ರಮೇಶ್‍ಕುಮಾರ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.11- ಸುಪ್ರೀಂಕೋರ್ಟ್ ಸೂಚನೆಯಂತೆ 10 ಮಂದಿ ಶಾಸಕರು ರಾಜೀನಾಮೆ ಪತ್ರ ಸಲ್ಲಿಸಿದರೆ ಅದರ ಬಗ್ಗೆ ಪರಿಶೀಲಿಸಿ ತೀರ್ಮಾನ ಮಾಡಲಾಗುವುದು ಎಂದು ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೈಗೊಂಡ ತೀರ್ಮಾನವನ್ನು ನ್ಯಾಯಾಲಯಕ್ಕೂ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಸುಪ್ರೀಂಕೋರ್ಟ್ ನೀಡಿದ ನಿರ್ದೇಶನಕ್ಕೆ ಸಂಬಂಧಿಸಿದಂತೆ ನಮ್ಮ ವಕೀಲರು ನ್ಯಾಯಾಲಯಕ್ಕೆ ಹಾಜರಾಗಿ ಏನು ಹೇಳಬೇಕೋ ಅದನ್ನು ಹೇಳುತ್ತಾರೆ. ನ್ಯಾಯಾಲಯದಲ್ಲಿ ಹೇಳುವುದನ್ನು ಇಲ್ಲಿ ಹೇಳಲು ಸಾಧ್ಯವಿಲ್ಲ ಎಂದರು.

10 ಮಂದಿ ಶಾಸಕರು ಮೊದಲು ಬರಲಿ. ಪೊಲೀಸರು ಅವರಿಗೆ ಸೂಕ್ತ ಭದ್ರತೆ ಒದಗಿಸುತ್ತಾರೆ. ನಾವು ಅವರ ರಾಜೀನಾಮೆ ಗೌರವಯುತವಾಗಿ ಸ್ವೀಕರಿಸುತ್ತೇವೆ. ಅವರು ಹೇಳುವುದನ್ನು ಆಲಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದರು.

ಸಿದ್ದರಾಮಯ್ಯ ಅವರು ಯಾವುದೇ ವಿಚಾರದ ಬಗ್ಗೆ ಚರ್ಚೆ ಮಾಡಿಲ್ಲ. ಇಬ್ಬರು ಕುಳಿತು ಕೆಲ ಕಾಲ ಮಾತನಾಡಿದೆವು. ಎಂದ ಅವರು, ಮಾಜಿ ಸಚಿವ ಸಿ.ಟಿ.ರವಿ ಅವರು ಬಂದಿದ್ದರು. ಅವರೊಂದಿಗೂ ಮಾತನಾಡಿದೆವು ಎಂದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ