ಸ್ಪೀಕರ್ ಕಚೇರಿಗೆ ಮತದಾರರ ಅಹವಾಲು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.17- ಶಾಸಕ ಬೈರತಿ ಬಸವರಾಜು ಅವರ ರಾಜೀನಾಮೆ ಅಂಗೀಕರಿಸುವ ಮುನ್ನ ತಮ್ಮ ಅಹವಾಲು ಸ್ವೀಕರಿಸಿ ನಂತರ ತೀರ್ಮಾನ ಕೈಗೊಳ್ಳಬೇಕು ಎಂದು ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಮೂವರು ಮತದಾರರು ಸ್ಪೀಕರ್ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.

ಇಂದು ಸ್ಪೀಕರ್ ಕಚೇರಿಗೆ ಆಗಮಿಸಿದ ನಂದೀಶ್‍ಗೌಡ ಸೇರಿದಂತೆ ಮೂವರು ಮತದಾರರು ಸ್ಪೀಕರ್ ಅವರ ಅನುಪಸ್ಥಿತಿಯಲ್ಲಿ ಅವರ ಕಚೇರಿಗೆ ಸಿಬ್ಬಂದಿಗೆ ಮನವಿ ಪತ್ರ ಸಲ್ಲಿಸಿ ತಮ್ಮ ಅಹವಾಲುಗಳನ್ನು ಸ್ವೀಕರಿಸಿ ಆನಂತರ ಬೈರತಿ ಬಸವರಾಜು ಅವರ ರಾಜೀನಾಮೆ ಅಂಗೀಕರಿಸುವ ಕುರಿತು ತೀರ್ಮಾನ ಕೈಗೊಳ್ಳಬೇಕೆಂದು ಕೋರಿದ್ದಾರೆ.

Facebook Comments