ಉಸಿರು ನಿಂತು ಹೋದ ಮೇಲೆ ಜೀವ ಹೋಗುವುದಿಲ್ಲವೇ…? : ಸ್ಪೀಕರ್ ರಮೇಶ್‍ಕುಮಾರ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.10-ಯಾರ ರಾಜೀನಾಮೆ ಪತ್ರವನ್ನೂ ತಿರಸ್ಕರಿಸಿಲ್ಲ. ಶಾಸಕರು ನೀಡಿರುವ ರಾಜೀನಾಮೆ ಪತ್ರವನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂ.ಟಿ.ಬಿ.ನಾಗರಾಜ್, ಡಾ.ಸುಧಾಕರ್ ರಾಜೀನಾಮೆ ಪತ್ರ ಕೊಟ್ಟಿದ್ದಾರೆ. ಅವುಗಳನ್ನು ಸ್ವೀಕರಿಸಲಾಗಿದೆ. ಈ ಎರಡೂ ಪತ್ರಗಳ ಬಗ್ಗೆ ಜು.17 ರಂದು ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಿಯೋಗ ನನ್ನನ್ನು ಭೇಟಿ ಮಾಡಿತ್ತು. ಶಾಸಕರ ರಾಜೀನಾಮೆ ಪತ್ರವನ್ನು ಬೇಗ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದೇನೆ ಎಂದು ಹೇಳಿದರು.

ಫೈನಾನ್ಸ್ ಬಿಲ್ ಆಗಲೇಬೇಕಾದ ಅನಿವಾರ್ಯತೆ ಇದೆಯಲ್ಲ ಎಂಬ ವಿಚಾರದ ಬಗ್ಗೆ ಬಿಜೆಪಿ ಪ್ರಸ್ತಾಪ ಮಾಡಿದೆಯಂತಲ್ಲ ಎಂದು ವರದಿಗಾರರು ಗಮನ ಸೆಳೆದಾಗ ಪ್ರತಿಕ್ರಿಯಿಸಿದ ರಮೇಶ್‍ಕುಮಾರ್ ಉಸಿರು ನಿಂತುಹೋದ ಮೇಲೆ ಜೀವ ಹೋಗುವುದಿಲ್ಲವೇ? ಫೈನಾನ್ಸ್ ಬಿಲ್ ಪಾಸಾಗದೆ ಇದ್ದರೆ ಸರ್ಕಾರ ಬಿದ್ದು ಹೋಗುತ್ತದೆ ಎಂದಷ್ಟೇ ಹೇಳಿದರು.

ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋಗಿರುವ ನನಗೆ ಗೊತ್ತಿಲ್ಲ ಎಂದು ರಮೇಶ್‍ಕುಮಾರ್ ಇದೇ ವೇಳೆ ಸ್ಪಷ್ಟಪಡಿಸಿದರು.

Facebook Comments