ರಂಜಾನ್ ಹಿನ್ನೆಲೆಯಲ್ಲಿ ಮತದಾನದ ವೇಳೆ ಬದಲಿಸುವಂತೆ ಆಯೋಗಕ್ಕೆ ಸುಪ್ರೀಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 2- ರಂಜಾನ್ ಮತ್ತು ವಿವಿಧ ರಾಜ್ಯಗಳಲ್ಲಿ ಉಷ್ಣ ಹವೆಯಿಂದಾಗಿ ಉಳಿದ ಮೂರು ಹಂತಗಳ ಲೋಕಸಭಾ ಚುನಾವಣೆಯ ಮತದಾನದ ವೇಳಾ ಪಟ್ಟಿಯನ್ನು ಬದಲಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಮೇ 5ರ ಭಾನುವಾರದಿಂದ ರಂಜಾನ್ ಉಪವಾಸ ಆರಂಭವಾಗಲಿದ್ದು , ಜೂ.5 ರವರೆಗೆ ನಡೆಯಲಿದೆ. ಅಲ್ಲದೆ ಕೆಲವು ರಾಜ್ಯಗಳಲ್ಲಿ ಬಿಸಿಲಿನ ತೀವ್ರ ದಗೆ ಮತ್ತೆ ಉಷ್ಣ ಹವೆಯಿಂದಾಗಿ ಮತದಾನಕ್ಕೆ ತೊಂದ ರೆಯಾಗಲಿದೆ. ಆದ ಕಾರಣ ಮತದಾನದ ವೇಳಾಪಟ್ಟಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕೆಂದು ಕೋರಿ ಸುಪ್ರೀಂಕೋರ್ಟ್‍ಗೆ ಕೆಲವು ಅರ್ಜಿಗಳನ್ನು ಸಲ್ಲಿಸಲಾಗಿದೆ.

ಈ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮತದಾನ ವೇಳಾ ಪಟ್ಟಿಯನ್ನು (ಬೆಳಗ್ಗೆ 7 ರಿಂದ ಸಂಜೆ 6ರವರೆಗೆ) ಬದಲಿಸುವ ಬಗ್ಗೆ ಆಯೋಗ ನಿರ್ಧಾರ ಕೈಗೊಳ್ಳಬಹುದು. ಬೆಳಗ್ಗೆ 6 ಗಂಟೆಯಿಂದಲೇ ಮತದಾನ ಆರಂಭಿಸಬೇಕೆಂಬ ಬಗ್ಗೆ ಅರ್ಜಿಗಳಲ್ಲಿ ಮನವಿ ಮಾಡಲಾಗಿದೆ. ಈ ಬಗ್ಗೆ ಆಯೋಗ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಸೂಚಿಸಿತ್ತು.

ರಂಜಾನ್ ಉಪವಾಸ: ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಮುಸ್ಲಿಂ ಮತದಾರರು ತಮ್ಮ ಆಚರಣೆಗೆ ತೊಂದರೆಯಾಗದಂತೆ ಸೂಕ್ತ ಅವಧಿಯಲ್ಲಿ ಮತ ಚಲಾಯಿಸಲು ಅವಕಾಶ ನೀಡಬಹುದಾದ ಸಾಧ್ಯತೆ ಬಗ್ಗೆಯೂ ಆಯೋಗ ಪರಿಶೀಲಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದೆ.

ಲೋಕಸಭೆಗೆ ಮೇ 6 , ಮೇ 12 ಮತ್ತು ಮೇ 19ರಂದು ಉಳಿದ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು , ಮೇ 23 ರಂದು ಫಲಿತಾಂಶ ಪ್ರಕಟವಾಗಲಿದೆ.

Facebook Comments