ರೈತವಿರೋಧಿ ಕಾಯ್ದೆಗಳು ರದ್ದಾಗುವವರೆಗೂ ಕಾಂಗ್ರೆಸ್ ಹೋರಾಟ ನಿಲ್ಲಲ್ಲ : ರಣದೀಪ್‍ಸಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.29- ರೈತರ ಬದುಕನ್ನು ಕಿತ್ತುಕೊಳ್ಳುವ ಭೂಸುಧಾರಣೆ ಮತ್ತು ಕೃಷಿ ಕಾಯ್ದೆ ತಿದ್ದುಪಡಿಗಳು ರದ್ದಾಗುವವರೆಗೂ ಕಾಂಗ್ರೆಸ್ ತನ್ನ ಹೋರಾಟವನ್ನು ಮುಂದುವರೆಸಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್‍ಸಿಂಗ್ ಸುರ್ಜೇವಾಲ ಪ್ರಕಟಿಸಿದ್ದಾರೆ.

ಟ್ವಿಟರ್‍ನಲ್ಲಿ ಹೇಳಿಕೆ ನೀಡಿರುವ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರಗಳು ರೈತ, ದಲಿತ, ಕಾರ್ಮಿಕ ಸಂಘಟನೆಗಳ ಧ್ವನಿಯನ್ನು ನಿಗ್ರಹಿಸಿ ತನ್ನ ಅೀನದಲ್ಲಿರಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಬಂದ್ ತೋರಿಸಿದೆ ಎಂದಿದ್ದಾರೆ.

ಕಾಂಗ್ರೆಸ್ ರೈತರೊಂದಿಗೆ ಈ ಹೋರಾಟದಲ್ಲಿ ಕೊನೆಯವರೆಗೂ ಜೊತೆ ನಿಲ್ಲಲಿದೆ. ರೈತರ ಬದುಕನ್ನ ಕಿತ್ತುಕೊಳ್ಳುವ ಭೂ ಸುಧಾರಣೆ ಕೃಷಿ ಕಾಯ್ದೆ ತಿದ್ದುಪಡಿಗಳು ರದ್ದಾಗಲೇ ಬೇಕು. ಆವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಪ್ರಕಟಿಸಿದ್ದಾರೆ.

ರಣದೀಪ್ ಅವರ ಈ ಹೇಳಿಕೆ ರಾಜ್ಯ ಸರ್ಕಾರದ ವಿರುದ್ಧದ ಹೋರಾಟ ಮತ್ತೆ ಮುಂದುವರೆಯುವ ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ ಯಾವುದೇ ವಿವಾದವಾಗಿದ್ದರೂ ಕಾಂಗ್ರೆಸ್ ಒಂದು ಹಂತದವರೆಗೆ ಹೋರಾಟ ಮಾಡಿ ಅನಂತರ ಬಿಟ್ಟು ಬಿಡುತ್ತದೆ. ಸ್ವಲ್ಪ ದಿನಗಳ ಬಳಿಕ ಜನರು ಕೂಡ ವಿಷಯ ಮರೆತು ಹೋಗುತ್ತಾರೆ.

Facebook Comments

Sri Raghav

Admin