ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ನಾಮಕರಣಕ್ಕೆ ಸಿಎಂ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

HD Kumaraswamyನವದೆಹಲಿ,ಡಿ.26-ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರಲ್ಲಿ ಮನವಿ ಮಾಡಿದ್ದಾರೆ. ಇಂದು ಮಧ್ಯಾಹ್ನ ವಿಮಾನಯಾನ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿಗಳು, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರನ್ನು ನಾಮಕರಣ ಮಾಡುವಂತೆ ಮನವಿ ಮಾಡಿದರು.

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರನ್ನು ನಾಮಕರಣ ಮಾಡಬೇಕೆಂದು ಸಾರ್ವಜನಿಕರಿಂದ ತೀವ್ರ ಒತ್ತಡ ಬಂದಿತ್ತು. ಹೀಗಾಗಿ ಮುಖ್ಯಮಂತ್ರಿಗಳು ಎರಡೂ ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ಸಂಬಂಧ ವಿಮಾನಯಾನ ಸಚಿವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿ ರಾಜ್ಯದ ಪರವಾಗಿ ಪ್ರಸ್ತಾವನೆ ಸಲ್ಲಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ