250 ಅಡಿ ಆಳದ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ ಮಾಜಿ ಕ್ರಿಕೆಟಿಗ

ಈ ಸುದ್ದಿಯನ್ನು ಶೇರ್ ಮಾಡಿ

ನಾಸಿಕ್,ಸೆ.2- ಚಾರಣಕ್ಕೆ ಹೋಗಿದ್ದ ಮಹಾರಾಷ್ಟ್ರದ ರಣಜಿ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುಮಾರು 250 ಅಡಿ ಆಳದ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.

ನಾಸಿಕ್ ಜಿಲ್ಲೆಯ ಪಶ್ಚಿಮಘಾಟ್ ಪ್ರದೇಶದಲ್ಲಿ ನಿನ್ನೆ ಸ್ನೇಹಿತರೊಂದಿಗೆ ಚಾರಣಕ್ಕೆ ತೆರಳಿದ್ದ ವೇಳೆ ಶೇಖರ್ ಗಾವಲಿ(45) ಪ್ರಪಾತಕ್ಕೆ ಉರುಳಿ ಬಿದ್ದಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ಪರಿಹಾರ ಕಾರ್ಯಗಳನ್ನು ಕೈಗೊಂಡಾಗ ಇಂದು ಬೆಳಗ್ಗೆ ಅವರ ಶವ ಪತ್ತೆಯಾಗಿದೆ.

Facebook Comments