ರಾಂಕಿಂಗ್‍ಸ್ಟಾರ್ ಯಶ್ ಮನೆ ಕಾಂಪೌಂಡ್‍ಗೆ ಟ್ರ್ಯಾಕ್ಟರ್ ಡಿಕ್ಕಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 27-ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ರಾಂಕಿಂಗ್ ಸ್ಟಾರ್ ಯಶ್ ಅವರ ಮನೆ ಕಾಂಪೌಂಡ್‍ಗೆ ಡಿಕ್ಕಿ ಹೊಡೆದಿದೆ. ಕಳೆದ ರಾತ್ರಿ ನಗರದಲ್ಲಿ ಸುರಿದ ಭಾರೀ ಮಳೆಯ ನಡುವೆಯೂ ಹೊಸಕೆರೆಯಲ್ಲಿ ತೆರಳುತ್ತಿದ್ದ ಟ್ರ್ಯಾಕ್ಟರ್‍ವೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಘಟನೆ ಸಂಭವಿಸಿದೆ.

ಘಟನೆ ನಡೆದ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಅನಾಹುತವೊಂದು ತಪ್ಪಿದೆಯಾದರೂ ಬೈಕ್‍ವೊಂದು ಸಂಪೂರ್ಣವಾಗಿ ಜಖಂಗೊಂಡಿದೆ.  ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲಿಸಿ ನಡೆಸಿದ್ದಾರೆ. ಘಟನೆಗೆ ಟ್ರ್ಯಾಕ್ಟರ್ ಬ್ರೇಕ್ ಫೇಲ್ ಆದದ್ದು ಕಾರಣ ಎಂದು ತಿಳಿದು ಬಂದಿದೆ.

ಜೆಸಿಬಿ ಮೂಲಕ ಟ್ರ್ಯಾಕ್ಟರ್ ಅನ್ನು ಸ್ಥಳಾಂತರಿಸಲಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ಯಶ್ ಅವರ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಕೂಡ ಹೇಳಲಾಗುತ್ತಿದೆ.

Facebook Comments