ಉತ್ತರ ಪ್ರದೇಶದಲ್ಲಿ ಮತ್ತೊಂದು ಉನ್ನಾವೋ ಮಾದರಿ ಪ್ರಕರಣ

ಈ ಸುದ್ದಿಯನ್ನು ಶೇರ್ ಮಾಡಿ

ಕಾನ್ಪುರ, ಡಿ.19-ಹೈದರಾಬಾದ್ ಮತ್ತು ಉನ್ನಾವೋ ಸಾಮೂಹಿಕ ಅತ್ಯಾಚಾರ ಮತ್ತು ಜೀವಂತ ದಹನ ಪ್ರಕರಣದ ಸಂಬಂಧ ದೇಶಾದ್ಯಂತ ಭುಗಿಲೆದ್ದಿರುವ ಆಕ್ರೋಶ ಶಮನಗೊಳ್ಳುತ್ತಿರುವ ಸಂದರ್ಭದಲ್ಲಿ ಅದೇ ರೀತಿಯ ಮತ್ತೊಂದು ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ದುಷ್ಕರ್ಮಿಯಿಂದ ಅತ್ಯಾಚಾರ ಮತ್ತು ಅಗ್ನಿ ಸ್ಪರ್ಶಕ್ಕೆ ಒಳಗಾಗಿ ಶೇ.90ರಷ್ಟು ಸುಟ್ಟಗಾಯಗಳಿಂದ ಕಾನ್ಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫತೇಪುರ್‍ನ 18 ವರ್ಷ ಯುವತಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಕೊನೆಯುಸಿರೆಳೆದಳು ಯುವತಿ 120 ತಾಸುಗಳ ಕಾಲ ಜೀವನ್ಮರಣ ಹೋರಾಟ ನಡೆಸಿದಳು.

ಆಕೆಯ ಶ್ವಾಸಕೋಶಗಳು ಮತ್ತು ಮೂತ್ರಪಿಂಡಗಳಿಗೆ ಗಂಭೀರ ಸ್ಪರೂಪದ ಗಾಯಗಳಾಗಿದ್ದವು. ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾಳೆ ಎಂದು ಆಸ್ಪತ್ರೆಯ ಸರ್ಜರಿ ವಿಭಾಗದ ಮುಖ್ಯಸ್ಥ ಡಾ. ಸಂಜಯ್ ಕಾಲಾ ತಿಳಿಸಿದ್ದಾರೆ. ಈ ಘಟನೆಯಿಂದ ಕಾನ್ಪುರ ಮತ್ತು ಫತೇಪುರದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ.

Facebook Comments