ವಿದ್ಯಾರ್ಥಿನಿಯನ್ನು ರೇಪ್ ಮಾಡಿ, ವಿಡಿಯೋ ಮಾಡಿದ ಕಾಮುಕರು..!

ಈ ಸುದ್ದಿಯನ್ನು ಶೇರ್ ಮಾಡಿ

ಮುಜಾಫರ್ ನಗರ, ಫೆ.5-ಒಂಬತ್ತನೆ ತರಗತಿಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ವ್ಯಕ್ತಿಗಳು ಆ ಕೃತ್ಯವನ್ನು ವಿಡಿಯೋಚಿತ್ರಿಕರಣ ಮಾಡಿ ಬ್ಲಾಕ್ ಮೇಲ್ ಮಾಡಿರುವ ಪ್ರಕರಣ ವರದಿಯಾಗಿದೆ. ಮುಜಾಫರ್ ನಗರ ಜಿಲ್ಲೆಯ ಕೋತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನಯಾಬ್ ಮತ್ತು ಪರ್ವೀಸ್ ಎಂಬುವರು 9ನೆ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಮನಿಯೊಂದರಲ್ಲಿ ಅತ್ಯಾಚಾರ ನಡೆಸಿದ್ದಾರೆ.
ಈ ಕೃತ್ಯವನ್ನು ವಿಡಿಯೋಚಿತ್ರಿಕರಣ ಮಾಡಿದ್ದಾರೆ. ಅತ್ಯಾಚಾರದ ವಿಷಯವನ್ನು ಎಲ್ಲಿಯಾದರೂ ಬಾಯಿ ಬಿಟ್ಟರೆ ವಿಡಿಯೋವನ್ನು ಇಂಟರ್ ನೆಟ್‍ನಲ್ಲಿ ಬಹಿರಂಗ ಪಡಿಸುವುದಾಗಿ ಬೆದರಿಸಿದ್ದಾರೆ ಎಂದು ಬಾಲಕಿಯ ತಾಯಿ ಆರೋಪಿಸಿದ್ದಾರೆ.

ಸಂತ್ರಸ್ಥೆಯ ತಾಯಿ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿರುವ ಪೊಲಿಸರು ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಸಂತ್ರಸ್ಥೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಇದೇ ಆರೋಪಿಗಳು 17 ವರ್ಷದ ಮತ್ತೊಬ್ಬ ಯುವತಿಯನ್ನು ಬ್ಲಾಕ್ ಮೇಲ್ ಮಾಡುತ್ತಿರುವ ಮಾಹಿತಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

Facebook Comments