50 ವರ್ಷದ ವಿಧವೆಯನ್ನು ರೇಪ್ ಮಾಡಿ ಗರ್ಭವತಿ ಮಾಡಿದ..!

ಈ ಸುದ್ದಿಯನ್ನು ಶೇರ್ ಮಾಡಿ

ಮಹೋಬಾ,ಜ.23-ಐವತ್ತು ವರ್ಷದ ವಿಧವೆ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭವತಿಯನ್ನಾಗಿಸಿರುವ ಘಟನೆ ಉತ್ತರಪ್ರದೇಶದ ಕೊತ್ವಾಲಿ ಗ್ರಾಮದಲ್ಲಿ ನಡೆದಿದೆ. ಕಳೆದ ಡಿ.7ರಂದು ಮನೆಗೆ ನುಗ್ಗಿದ ಅಖಿಲೇಶ್ ಅಹಿರ್ವಾರ್ ಎಂಬ ವ್ಯಕ್ತಿ ನನ್ನನು ಬೆದರಿಸಿ ಅತ್ಯಾಚಾರ ನಡೆಸಿದ್ದಾನೆ. ಹೀಗಾಗಿ ನಾನು ಗರ್ಭವತಿಯಾಗಿದ್ದೇನೆ ಎಂದು ಸಂತ್ರಸ್ಥ ಮಹಿಳೆ ದೂರು ನೀಡಿದ್ದಾರೆ ಎಂದು ಕೋತ್ವಾಲಿ ಪೊಲೀಸ್ ಠಾಣೆಯ ಅಧಿಕಾರಿ ಶಶಿಕುಮಾರ್ ಪಾಂಡೆ ತಿಳಿಸಿದ್ದಾರೆ.

ಅತ್ಯಾಚಾರ ನಡೆಸಿರುವ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಅಖಲೇಶ್ ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಅತ್ಯಾಚಾರ ನಡೆಸಿ ಪರಾರಿಯಾಗಿರುವ ಆರೋಪಿ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗಿದೆ.

Facebook Comments