ಶಾಕಿಂಗ್ : ಬೆಂಗಳೂರಲ್ಲಿ ಪರೀಕ್ಷೆಗೊಳಗಾದ ಪ್ರತಿ 100 ಮಂದಿಯಲ್ಲಿ 20 ಜನರಿಗೆ ಪಾಸಿಟಿವ್..!

ಈ ಸುದ್ದಿಯನ್ನು ಶೇರ್ ಮಾಡಿ

ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಬೆಂಗಳೂರು, ಆ.14- ನಗರದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಇಂದು ಹೆಚ್ಚಾಗುವ ಸಾಧ್ಯತೆ ಇದೆ.

ಕೊರೊನಾ ತಪಾಸಣೆಯನ್ನು ಬಿಬಿಎಂಪಿ ಹೆಚ್ಚು ಮಾಡಿರುವುದರಿಂದ ಸೋಂಕಿತರ ಪ್ರಮಾಣ ಸಹಜವಾಗಿಯೇ ಹೆಚ್ಚಾಗುವ ಸಾಧ್ಯತೆ ಇದೆ.ಬೆಂಗಳೂರಿನ 181 ಆಸ್ಪತ್ರೆಗಳಲ್ಲಿ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ.

ಕಳೆದೆರಡು ದಿನಗಳ ಹಿಂದೆ 20,059 ಜನರಿಗೆ ಟೆಸ್ಟ್ ಮಾಡಲಾಗಿತ್ತು. ಪ್ರತಿ ನೂರು ಜನರಲ್ಲಿ 18 ರಿಂದ 20 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ತಪಾಸಣೆ ಪ್ರಮಾಣವನ್ನು ಬಿಬಿಎಂಪಿ ಹೆಚ್ಚು ಮಾಡಿದೆ.

ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ ಸ್ವಾಬ್ ಟೆಸ್ಟ್‍ಅನ್ನು ನಿರಂತರವಾಗಿ ಮಾಡುತ್ತಿದೆ. ಹಾಗಾಗಿ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಈಗಾಗಲೇ ಪ್ರತಿದಿನ 2000 ದಿಂದ 2500ರಷ್ಟು ನಗರದಲ್ಲಿ ಸೋಂಕಿತರ ಸಂಖ್ಯೆ ಕಂಡುಬರುತ್ತಿದ್ದು, ಈಗ ತಪಾಸಣೆಯ ಪ್ರಮಾಣವನ್ನು ಗಮನಿಸಿದರೆ ಸೋಂಕಿತರ ಸಂಖ್ಯೆ ನಗರದಲ್ಲಿ 3000ಕ್ಕೆ ಏರುವ ಸಾಧ್ಯತೆ ಕಂಡುಬರುತ್ತಿದೆ.

Facebook Comments

Sri Raghav

Admin