6 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕಾಮುಕ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

ಥಾಣೆ,ಸೆ.18-ಆರು ವರ್ಷದ ಬಾಲಕಿ ಮೇಲೆ ಹಲವಾರು ಭಾರಿ ಅತ್ಯಾಚಾರ ನಡೆಸಿರುವ ಕಾಮುಕನನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಥಾಣೆ ಜಿಲ್ಲೆಯ ಉಲ್ಲಾಸನಗರ ನಿವಾಸಿಯಾದ 42 ವರ್ಷದ ವ್ಯಕ್ತಿ ವರಸೆಯಲ್ಲಿ ಸೊಸೆಯಾಗಬೇಕಿದ್ದ ಆರು ವರ್ಷದ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದ ಆರೋಪಕ್ಕೆ ಗುರಿಯಾಗಿದ್ದ.

ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದ ಕಾಮುಕ ಬಾಲಕಿಯನ್ನು ಆಟವಾಡಿಸುವ ನೆಪದಲ್ಲಿ ಅತ್ಯಾಚಾರ ನಡೆಸುತ್ತಿದ್ದ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ಆಟವಾಡುವ ನೆಪದಲ್ಲಿ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ನಡೆಸುತ್ತಿದ್ದಾಗ ಬಾಲಕಿಯ ಸಹೋದರನಿಗೆ ರೆಡ್‍ಹ್ಯಾಂಡಾಗಿ ಸಿಕ್ಕಿಬಿದ್ದಿದ್ದ. ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿದ್ದ ಹಿಲ್ ಲೈನ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments