ಅತ್ಯಾಚಾರಿ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಬಳ್ಳಾಪುರ, ಜ.10- ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಚಿಕ್ಕಬಳ್ಳಾಪುರ ನ್ಯಾಯಾಲಯದ ನ್ಯಾಯಾಧೀಶರು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಗುಡಿಬಂಡೆ ತಾಲ್ಲೂಕಿನ ಸತೀಶ್ ಪೋಕ್ಸೋ ಕಾಯ್ದೆಯಡಿ ಶಿಕ್ಷೆಗೊಳಗಾದ ಆರೋಪಿ.

ಈತ ಊಟ ಕೊಡಿಸುವ ನೆಪದಲ್ಲಿ 7 ವರ್ಷದ ಬಾಲಕಿಯನ್ನು ಕಳೆದ ಜು.31ರಂದು ಕರೆದೊಯ್ದು ಅತ್ಯಾಚಾರವೆಸಗಿದ್ದನು. ಈ ಸಂಬಂಧ ಗುಡಿಬಂಡೆ ಠಾಣೆ ಅತ್ಯಾಚಾರಿ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಚಿಕ್ಕಬಳ್ಳಾಪುರ ಒಂದನೇ ಹೆಚ್ಚುವರಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ನ್ಯಾಯಾಧೀಶರಾದ ನಟರಾಜ್‍ರವರು ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

Facebook Comments