Saturday, April 27, 2024
Homeಮನರಂಜನೆಡೀಪ್‍ಫೇಕ್ ವಿಡಿಯೋ ಬಗ್ಗೆ ಮೌನ ಮುರಿದ ರಶ್ಮಿಕಾ

ಡೀಪ್‍ಫೇಕ್ ವಿಡಿಯೋ ಬಗ್ಗೆ ಮೌನ ಮುರಿದ ರಶ್ಮಿಕಾ

ಮುಂಬೈ,ನ.28- ನಟಿ ರಶ್ಮಿಕಾ ಮಂದಣ್ಣ ತಮ್ಮ ಡೀಪ್‍ಫೇಕ್ ವಿಡಿಯೋ ಬಗ್ಗೆ ಮೌನ ಮುರಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಇದೇ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ರಶ್ಮಿಕಾ ನಟನೆಯ ಬಾಲಿವುಡ್ ಸಿನಿಮಾ ಅನಿಮಲï ಈ ವಾರ ತೆರೆಗೆ ಬರುತ್ತಿದೆ. ಸಿನಿಮಾ ಪ್ರಚಾರಕ್ಕಾಗಿ ತಂಡದ ಜತೆ ಹೈದರಾಬಾದ್‍ಗೆ ಹೋಗಿದ್ದರು. ಈ ವೇಳೆ ಮಾಧ್ಯಮಗಳ ಪ್ರಶ್ನೆಗೆ ರಶ್ಮಿಕಾ ಉತ್ತರಿಸಿದ್ದಾರೆ. ನಿಮ್ಮ ಡೀಪ್‍ಫೇಕ್ ವಿಡಿಯೋ ಬಂದಾಗ ಅಮಿತಾಬ್ ಬಚ್ಚನ್ ಸೇರಿದಂತೆ ಹಲವರು ಬೆಂಬಲಕ್ಕೆ ನಿಂತರು. ಆ ಬಗ್ಗೆ ಏನು ಹೇಳುತ್ತೀರಾ ಎನ್ನುವ ಪ್ರಶ್ನೆಗೆ, ಈ ಸಮಸ್ಯೆ ಎಲ್ಲರಿಗೂ ಇದೆ. ಮೊದಲಿಗೆ ಅಮಿತಾಬ್ ಬಚ್ಚನ್ ಸರ್‍ಸಪೋರ್ಟ್ ಮಾಡಿದರು. ನಂತರ ಎಲ್ಲರೂ ಬೆಂಬಲಿಸಿದರು. ಮೊದಲು ಆ ವಿಡಿಯೋ ನೋಡಿದಾಗ ನೋವಾಯಿತು. ಆದರೆ, ಇದು ಸರ್ವೇ ಸಾಧಾರಣ ಆಗಿಬಿಟ್ಟಿದೆ. ಮೊದ ಮೊದಲು ಭಯ ಆಯ್ತು.

ನಾವೇನುಮಾಡೋಕೆ ಸಾಧ್ಯ ಎಂದುಕೊಂಡೆ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದು ಬೇಡ ಎಂದುಕೊಂಡೆ. ಆದರೆ, ಎಲ್ಲರೂ ಮುಂದೆ ಬಂದು ಸಪೋರ್ಟ್ ಮಾಡಿದ್ದು ನೋಡಿ ಇದು ಸಾಮಾನ್ಯ ವಿಷಯ ಅಲ್ಲ, ನಾನು ಪ್ರತಿಕ್ರಿಯಿಸಬೇಕು ಎಂದು ಕೊಂಡೆ. ಈ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಹಾಗಾಗಿ ಎಲ್ಲಾ ಹುಡುಗಿಯರಿಗೆ ಹೇಳಲು ಬಯಸುತ್ತೇನೆ.

ಇಸ್ರೇಲ್-ಹಮಾಸ್ ನಡುವೆ ಮತ್ತೆರಡು ದಿನ ಕದನ ವಿರಾಮ

ಈ ವಿಷಯಗಳು ಸಾಮಾನ್ಯವಲ್ಲ. ಇದು ನಿಮಗೆ ಎದುರಾದರೆ ಮೌನವಾಗಿರದೆ ಪ್ರತಿಕ್ರಿಯಿಸಿ. ಜನ ಬೆಂಬಲಿಸುತ್ತಾರೆ. ನಾವು ಒಳ್ಳೆ ದೇಶದಲ್ಲಿದ್ದೇವೆ ಎಂದು ರಶ್ಮಿಕಾ ಹೇಳಿದ್ದಾರೆ. ತಿಂಗಳ ಹಿಂದೆ ರಶ್ಮಿಕಾ ಡೀಪ್‍ಫೇಕ್ ವಿಡಿಯೋ ವೈರಲ್ ಆಗಿತ್ತು. ಅಮಿತಾಬ್ ಬಚ್ಚನ್, ವಿಜಯ್ ದೇವರಕೊಂಡ, ನಾಗಚೈತನ್ಯಾ ಸೇರಿದಂತೆ ಹಲವರು ಇವರ ಬೆಂಬಲಕ್ಕೆ ನಿಂತಿದ್ದರು. ಈ ಬಗ್ಗೆ ರಶ್ಮಿಕಾ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದರು.

ಈ ವಿಚಾರವನ್ನು ಹಂಚಿಕೊಳ್ಳಲು ನನಗೆ ತುಂಬಾ ನೋವಾಗಿದೆ. ಆದರೂ ವೈರಲ್ ಆಗುತ್ತಿರುವ ನನ್ನ ಡೀಪ್‍ಫೇಕ್ ವೀಡಿಯೊ ಬಗ್ಗೆ ಮಾತನಾಡಬೇಕಾಗಿದೆ. ಪ್ರಾಮಾಣಿಕವಾಗಿ ಹೇಳಬೇಕೆಂದರೇ, ಈ ರೀತಿ ಏನಾದರೂ ಆಗುವುದು ನನಗೆ ಮಾತ್ರವಲ್ಲ, ಪ್ರತಿಯೊಬ್ಬರಿಗೂ ತುಂಬಾ ಭಯಾನಕ. ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಕಾರಣದಿಂದಾಗಿ ಇಂದು ನಮ್ಮಲ್ಲಿ ಹಲವರು ಇಂತಹ ಘಟನೆಗಳಿಗೆ ಗುರಿಯಾಗುತ್ತಿದ್ದಾರೆ ಎಂದಿದ್ದಾರೆ.

ಮಹಿಳೆಯಾಗಿ ಮತ್ತು ನಟಿಯಾಗಿ ನನ್ನ ರಕ್ಷಣೆಗೆ ಮತ್ತು ಬೆಂಬಲಕ್ಕೆ ಬಂದ ನನ್ನ ಕುಟುಂಬ, ಸ್ನೇಹಿತರು ಮತ್ತು ಹಿತೈಷಿಗಳಿಗೆ ನಾನು ಕೃತಜ್ಞಳಾಗಿದ್ದೇನೆ. ಆದರೆ, ನಾನು ಶಾಲೆ ಅಥವಾ ಕಾಲೇಜಿನಲ್ಲಿದ್ದಾಗ ಇಂತಹ ಘಟನೆ ನಡೆದಿದ್ದರೆ ನಾನು ಅದನ್ನು ಹೇಗೆ ನಿಭಾಯಿಸುತ್ತಿದ್ದೇ ಎಂಬುದು ನಿಜಕ್ಕೂ ನನಗೆ ಗೊತ್ತಿಲ್ಲ. ನಮ್ಮಲ್ಲಿ ಹೆಚ್ಚಿನವರು ಇಂತಹ ಕೆಟ್ಟ ಘಟನೆಗೆ ಸಾಕ್ಷಿಯಾಗುವ ಮೊದಲು ತುರ್ತಾಗಿ ಪರಿಹರಿಸಬೇಕಾಗಿದೆ ಎಂದು ರಶ್ಮಿಕಾ ಮನವಿ ಮಾಡಿದ್ದಾರೆ.

ಭಾರತದ ರಾಯಭಾರಿಯೊಂದಿಗೆ ಅನುಚಿತ ವರ್ತನೆ : ಖಾಲಿಸ್ತಾನಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಸೆಲೆಬ್ರಿಟಿಗಳಿಗೆ ಡೀಪ್‍ಫೇಕ್ ಹೊಸ ಸಮಸ್ಯೆಯಾಗಿ ಪರಿಣಮಿಸಿದೆ. ಒಬ್ಬರ ಬಳಿಕ ಒಬ್ಬರ ಫೇಕ್ ವೀಡಿಯೋಗಳು ವೈರಲ್ ಆಗುತ್ತಿದೆ. ನಟಿ ರಶ್ಮಿಕಾ ಮಂದಣ್ಣ ಡೀಪ್‍ಫೇಕ್ ವಿಡಿಯೋ ಭಾರೀ ಕೋಲಾಹಲ ಸೃಷ್ಟಿಸಿತ್ತು.

RELATED ARTICLES

Latest News