ಐಟಿ ಕಚೇರಿಯಲ್ಲಿ ರಶ್ಮಿಕಾ ಮಂದಣ್ಣ ವಿಚಾರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಜ.21- ನಟಿ ರಶ್ಮಿಕಾ ಮಂದಣ್ಣ ಅವರು ತಮ್ಮ ತಂದೆ-ತಾಯಿಯೊಂದಿಗೆ ನಗರದ ಮಿನಿ ವಿಧಾನಸೌಧದ ಬಳಿ ಇರುವ ಪ್ರಧಾನ ಆದಾಯ ತೆರಿಗೆ ಆಯುಕ್ತರ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಹಿನ್ನೆಲೆಯಲ್ಲಿ ಅವರ ಕುಟುಂಬದವರಿಗೆ ಐಟಿ ಅಧಿಕಾರಿಗಳ ಮುಂದೆ ಹಾಜರಾಗಲು ನೀಡಿದ್ದ ನೋಟಿಸ್ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮೈಸೂರಿನ ಈ ಕಚೇರಿಗೆ ಆಗಮಿಸಿದ್ದರು.

ಮಡಿಕೇರಿಯಲ್ಲಿರುವ ರಶ್ಮಿಕಾ ಅವರ ಮನೆ ಮತ್ತು ಅವರ ತಂದೆಯ ಸೆರಿನಿದಿ ಹಾಲ್ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ಎರಡು ದಿನಗಳ ಕಾಲ ಪರಿಶೀಲನೆ ನಡೆಸಿದ್ದರು.
ತಂದೆ ಮದನ್ ಮಂದಣ್ಣ, ತಾಯಿ ಸುಮನ್ ಮಂದಣ್ಣ ಹಾಗೂ ರಶ್ಮಿಕಾ ಅವರಿಗೆ ಕಚೇರಿಗೆ ಹಾಜರಾಗಲು ನೋಟಿಸ್ ನೀಡಲಾಗಿತ್ತು.

Facebook Comments