IPS ಅಧಿಕಾರಿ ರವೀಂದ್ರನಾಥ್‍ ರಾಜೀನಾಮೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.29- ತಮಗೆ ಬಡ್ತಿ ನೀಡಿಲ್ಲ ಎಂದು ಸಿಐಡಿ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ರವೀಂದ್ರನಾಥ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ತಮ್ಮ ಸೇವಾ ಹಿರಿತನವನ್ನು ಕಡೆಗಣಿಸಿ ತಮಗಿಂತ ಕಿರಿಯ ಅಧಿಕಾರಿಗೆ ಡಿಜಿಪಿ ಹುದ್ದೆಗೆ ಸರ್ಕಾರ ಬಡ್ತಿ ನೀಡಿದೆ ಎಂದು ಅವರು ಅಸಮಾಧಾನಗೊಂಡಿದ್ದಾರೆ.

ತಡರಾತ್ರಿ ನೃಪತುಂಗ ರಸ್ತೆಯಲ್ಲಿರುವ ಡಿಜಿ ಕಚೇರಿಯ ಕಂಟ್ರೋಲ್ ರೂಂಗೆ ರಾಜೀನಾಮೆ ಪತ್ರ ನೀಡಿದ್ದಾರೆ. ತಮ್ಮ ಸೇವಾ ಹಿರಿತನವನ್ನು ಕಡೆಗಣಿಸಿ ತಮಗಿಂತ ಕಿರಿಯ ಅಧಿಕಾರಿಗೆ ಬಡ್ತಿ ನೀಡಲಾಗಿದೆ ಎಂದು ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ತಡರಾತ್ರಿ ಡಿಜಿ ಕಚೇರಿಯ ಕಂಟ್ರೋಲ್ ರೂಂಗೆ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ, ಅವರ ಮೇಲೆ ವಿವಿಧ ಪ್ರಕರಣಗಳಲ್ಲಿ ಇಲಾಖೆ ವಿಚಾರಣೆ ನಡೆಯುತ್ತಿರುವುದರಿಂದ ಬಡ್ತಿ ನೀಡಿಲ್ಲ ಎಂದು ಗೃಹ ಇಲಾಖೆ ಮೂಲಗಳು ತಿಳಿಸಿವೆ. ಈಗಾಗಲೇ ಈ ವಿಚಾರಣೆಯ ವರದಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿದ್ದು, ಅದರಲ್ಲಿರುವ ವರದಿಯನ್ನು ಪರಿಗಣಿಸಿ ಅದರ ಆಧಾರದ ಮೇಲೆ ಬಡ್ತಿ ಬಗ್ಗೆ ನಿರ್ಧರಿಸಲಾಗುವುದು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಪೊಲೀಸ್ ಇಲಾಖೆಯಲ್ಲಿ ಜೇಷ್ಠತೆ ಜತೆಗೆ ವೃತ್ತಿ ಜೀವನದ ಬಗ್ಗೆಯೂ ಗಮನ ಹರಿಸಲಾಗುತ್ತದೆ. ಪ್ರಮುಖ ಹುದ್ದೆಗೆ ಬಡ್ತಿ ನೀಡುವ ಸಂದರ್ಭದಲ್ಲಿ ಅವರ ಹಿಂದಿನ ಎಲ್ಲಾ ವಿಷಯಗಳನ್ನು ಕೂಡ ಗಣನೆಗೆ ತೆಗೆದುಕೊಳ್ಳುವ ನಿಯಮವಿದೆ. ಯಾವೊಬ್ಬ ಅಧಿಕಾರಿಯನ್ನೂ ಅಪಮಾನಿಸುವ ಅಥವಾ ನಿರ್ಲಕ್ಷಿಸುವ ಪ್ರಮೆಯವೇ ಇಲ್ಲ ಎಂದು ಹೇಳಲಾಗಿದೆ.

Facebook Comments