ಆರ್‌ಟಿಐ ಅಡಿ ಮಾಹಿತಿ ನೀಡಿದ್ದರೆ ಗಂಭೀರ ಕ್ರಮ, ಆರ್‌ಬಿಐಗೆ ಸುಪ್ರೀಂಕೋರ್ಟ್ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಏ.26-ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ ) ಅಡಿ ಬ್ಯಾಂಕ್‍ಗಳಿಗೆ ಸಂಬಂಧಪಟ್ಟಂತೆ ತನ್ನ ವಾರ್ಷಿಕ ತಪಾಸಣೆ ವರದಿ ಮಾಹಿತಿಯನ್ನು ಬಹಿರಂಗಗೊಳಿಸಬೇಕೆಂದು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐಗೆ) ಸುಪ್ರೀಂಕೋರ್ಟ್ ಇಂದು ನಿರ್ದೇಶನ ನೀಡಿದೆ.

ಇದೇ ವೇಳೆ ಆರ್‍ಟಿಐ ಅಡಿ ಮಾಹಿತಿ ಹಂಚಿಕೊಳ್ಳಲು ನಿರಾಕರಿಸಿದರೆ ಆರ್‍ಬಿಐ ಧೋರಣೆಯನ್ನು ಗಂಭೀರವಾಗಿ ಪರಿಗಣಿಸುವುದಾಗಿಯೂ ಎಚ್ಚರಿಕೆ ನೀಡಿದೆ
ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ಪೀಠ, ಆರ್‍ಟಿಐ ಅಡಿ ಬ್ಯಾಂಕುಗಳಿಗೆ ಸಂಬಂಧಪಟ್ಟ ಮಾಹಿತಿ ಬಹಿರಂಗಗೊಳಿಸುವ ತನ್ನ ನೀತಿಯನ್ನೂ ಪರಾಮರ್ಶೆ ಮಾಡಿಕೊಳ್ಳಬೇಕು. ಇದು ಕಾನೂನಿನಡಿ ಸಂಪೂರ್ಣ ಪಾಲನೆಗೆ ಯೋಗ್ಯವಾಗಿರುತ್ತದೆ ಎಂದು ಸೂಚಿಸಿದೆ.

ಈ ಸಂಬಂಧ ಆರ್‍ಬಿಐ ವಿರುದ್ಧ ನ್ಯಾಯಾಲಯ ನಿಂದನೆ ಪ್ರಕರಣ ಜರುಗಿಸಲು ಇಚ್ಚಿಸದ ಸುಪ್ರೀಂಕೋರ್ಟ್, ಪಾರದರ್ಶಕ ಕಾನೂನಿನ ನಿಯಮಗಳಿಗೆ ಬದ್ಧವಾಗಿರುವಂತೆ ಭಾರತೀಯ ರಿಸರ್ವ್ ಬ್ಯಾಂಕ್‍ಗೆ ಕಟ್ಟ ಕಡೆಯ ಅವಕಾಶ ನೀಡುತ್ತಿರುವುದಾಗಿಯೂ ಸ್ಪಷ್ಟಪಡಿಸಿದೆ.

ಆರ್‍ಟಿಐ ಅಡಿ ಮಾಹಿತಿ ಹಂಚಿಕೊಳ್ಳಲು ನಿರಾಕರಿಸಿದರೆ ಅಥವಾ ಕಾನೂನು ಉಲ್ಲಂಘಿಸಿದರೆ ಆರ್‍ಬಿಐ ಧೋರಣೆಯನ್ನು ಗಂಭೀರವಾಗಿ ಪರಿಗಣಿಸುವುದಾಗಿಯೂ ಸರ್ವೋಚ್ಚ ನ್ಯಾಯಾಲಯ ಎಚ್ಚರಿಕೆ ನೀಡಿದೆ.

ಪದೇ ಪದೇ ನಿಯಮಗಳನ್ನು ಉಲ್ಲಂಘಿಸುತ್ತಿರುವ ಆರ್‍ಬಿಐ ವಿರುದ್ಧ ನ್ಯಾಯಾಲಯ ನಿಂದನೆ ಕ್ರಮ ಜರುಗಿಸಬೇಕೆಂದು ಕೋರಿ ಆರ್‍ಟಿಐ ಕಾರ್ಯಕರ್ತ ಎಸ್.ಸಿ.ಅಗರ್‍ವಾಲ್ ಅವರು ಸಲ್ಲಿಸಿದ್ದ ಅರ್ಜಿ ಸಂಬಂಧ ಸುಪ್ರೀಂಕೋರ್ಟ್ ಇಂದು ಈ ಸೂಚನೆಗಳನ್ನು ನೀಡಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ