ಸಿಎಸ್‌ಕೆ ವಿರುದ್ಧ ಆರ್ಸಿಬಿಗೆ ರೋಚಕ ಗೆಲುವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.22- ಐಪಿಎಲ್ 12ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಮಹೇಂದ್ರಸಿಂಗ್ ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲು ಕಂಡಿದ್ದ ವಿರಾಟ್ ಕೊಹ್ಲಿ ಸಾರಥ್ಯದ ಆರ್‍ಸಿಬಿ ತಂಡವು ತವರಿನಲ್ಲಿ ತೀರಿಸಿಕೊಂಡಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರನ್ ನಿಂದ ಚನ್ನೈ ಮಣಿಸುವ ಮೂಲಕ ಟೂರ್ನಿಯಲ್ಲಿ ಮೂರನೇ ಗೆಲುವು ದಾಖಲಿಸಿದೆ.

ಮೊದಲಿಗೆ ಬ್ಯಾಟಿಂಗ್ ಮಾಡಿದ ಆರ್.ಸಿ.ಬಿ. ಪಾರ್ಥಿವ್ ಪಟೇಲ್ ಅವರ ಅರ್ಧಶತಕ(53) ನೆರವಿನಿಂದ 7 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತ್ತು.

ಗೆಲುವಿಗೆ 162 ರನ್ ಟಾರ್ಗೆಟ್ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ನಿರಾಳವಾಗಿತ್ತು. ಕಾರಣ ಆರ್ಸಿಬಿ ಬೌಲಿಂಗ್‌ನಲ್ಲಿ ಸುಲಭವಾಗಿ ಗುರಿ ಮುಟ್ಟಬಹುದು ಅನ್ನೋ ಲೆಕ್ಕಾಚಾರದಲ್ಲಿತ್ತು. ಆದರೆ ಡೇಲ್ ಸ್ಟೇನ್ ಹಾಗೂ ಉಮೇಶ್ ಯಾದವ್ ಆರಂಭದಲ್ಲೇ ಶಾಕ್ ನೀಡಿದರು. ಶೇನ್ ವ್ಯಾಟ್ಸ್‌ನ್ 5 ಹಾಗೂ ಸುರೇಶ್ ರೈನಾ ಶೂನ್ಯಕ್ಕೆ ಔಟಾದರು.

ಫಾಫ್ ಡುಪ್ಲೆಸಿಸ್ ಹಾಗೂ ಕೇದಾರ್ ಜಾಧವ್ ಕೂಡ ಆಸರೆಯಾಗಲಿಲ್ಲ. ದಿಢೀರ್ 4 ವಿಕೆಟ್ ಕಳೆದುಕೊಂಡ ಸಿಎಸ್‌ಕೆ ತಂಡಕ್ಕೆ ಅಂಬಾಟಿ ರಾಯುಡು ಹಾಗೂ ಎಂ.ಎಸ್.ಧೋನಿ ಜೊತೆಯಾಟ ಚೇತರಿಕೆ ನೀಡಿತು. ರಾಯುಡು 29 ರನ್ ಸಿಡಿಸಿ ಔಟಾದರು. ಧೋನಿ ಬ್ಯಾಟಿಂಗ್ ಆರ್ಸಿಬಿ ಲೆಕ್ಕಾಚಾರ ಉಲ್ಟಾ ಮಾಡಿತು.

ರವೀಂದ್ರ ಜಡೇಜಾ ಜೊತೆ ಇನ್ನಿಂಗ್ಸ್ ಮುಂದುವರಿಸಿದ ಧೋನಿ ಸಿಎಸ್‌ಕೆ ತಂಡದ ಗೆಲುವಿನ ಆಸೆ ಚಿಗುರಿಸಿದರು. ಆದರೆ ಜಡೇಜಾ ಕೇವಲ 11 ರನ್ ಸಿಡಿಸಿ ಔಟಾದರೆ, ಅಂತಿಮ ಹಂತದಲ್ಲಿ ಡ್ವೇನ್ ಬ್ರಾವೋ ಕೂಡ ನೆರವಾಗಲಿಲ್ಲ. ಸಿಎಸ್‌ಕೆ ಗೆಲುವಿಗೆ ಅಂತಿಮ 6 ಎಸೆತದಲ್ಲಿ 26 ರನ್ ಅವಶ್ಯಕತೆ ಇತ್ತು.

ಮೊದಲ 3 ಎಸೆತದಲ್ಲಿ ಧೋನಿ ಬೌಂಡರಿ ಹಾಗೂ 2 ಸಿಕ್ಸರ್ ಸಿಡಿಸಿದರು. 4ನೇ ಎಸೆತದಲ್ಲಿ 2 ರನ್ ಸಿಡಿಸಿದ ಧೋನಿ 5 ಎಸೆದಲ್ಲಿ ಸಿಕ್ಸರ್ ಸಿಡಿಸಿದರು. ಈ ಮೂಲಕ ಅಂತಿಮ 1 ಎಸೆತದಲ್ಲಿ 2 ರನ್ ಬೇಕಿತ್ತು. ಈ ವೇಳೆ ಬ್ರಾವೋ ರನೌಟ್‌ಗೆ ಬಲಿಯಾದರು. ಈ ಮೂಲಕ ಆರ್ಸಿಬಿ 1 ರನ್ ರೋಚಕ ಗೆಲುವು ಸಾಧಿಸಿತು.

ಚೆನ್ನೈ ಕೂಡ ಹಿಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಕಂಡಿದ್ದರೂ ಇಂದಿನ ಪಂದ್ಯದಲ್ಲಿ ನಾಯಕ ಮಹೇಂದ್ರಸಿಂಗ್ ಧೋನಿ ಸೇರ್ಪಡೆಯಾಗು ವುದರಿಂದ ಆರ್‍ಸಿಬಿ ವಿರುದ್ಧ ಗೆಲ್ಲುವ ಸೂಚನೆ ನೀಡಿತ್ತು. ಆದರೆ ಕೊನೆಯ ಎಸೆತದಲ್ಲಿ ಆರ್ಸಿಬಿ ಶಾಕ್ ನೀಡಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin