ಪಕ್ಷದ ಹಣವನ್ನು ಬ್ಯಾಂಕಿನಲ್ಲಿಟ್ಟು ಮರಿ ಹಾಕಲು ಬಿಟ್ಟಿದ್ದೀರಾ..? : ಉಪೇಂದ್ರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.18- ಪ್ರವಾಹದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಹಣವನ್ನು ಬ್ಯಾಂಕಿನಲ್ಲಿ ಮರಿ ಹಾಕಲು ಬಿಟ್ಟಿರುವುದು ಎಷ್ಟು ಸರಿ ಎಂದು ರಿಯಲ್ ಸ್ಟಾರ್ ಖ್ಯಾತಿಯ ಉಪೇಂದ್ರ ಪ್ರಶ್ನಿಸಿದ್ದಾರೆ.

ಉತ್ತರಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಿಂದ ಉಂಟಾಗಿರುವ ಪ್ರವಾಹದ ಬಗ್ಗೆ ಟ್ವೀಟ್ ಮಾಡಿರುವ ಅವರು, ಜನರಿಂದಲೇ ಕೋಟಿ ಕೋಟಿ ನಿಧಿ ಸಂಗ್ರಹಿಸುವ ಎಲ್ಲ ರಾಜಕೀಯ ಪಕ್ಷಗಳು ಆ ಹಣವನ್ನು ಕೇವಲ ಚುನಾವಣೆ ಸಮಯದಲ್ಲಿ ತಮ್ಮ ಪಕ್ಷದ ಜಾಹಿರಾತುಗಳಿಗೆ ಹಾಗೂ ದೊಡ್ಡ ಸಭೆ ಸಮಾರಂಭಗಳಿಗೆ ಮಾತ್ರ ಖರ್ಚು ಮಾಡುತ್ತಾರೆ.

ಜನರು ಕಷ್ಟದಲ್ಲಿರುವಾಗ ಆ ದುಡ್ಡನ್ನು ಬ್ಯಾಂಕ್‍ನಲ್ಲಿ ಮರಿ ಹಾಕಲು ಬಚ್ಚಿಟ್ಟುಕೊಳ್ಳುವುದು ಸರಿಯೇ ಎಂದು ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕರೂ ಆಗಿರುವ ಉಪೇಂದ್ರ ಪ್ರಶ್ನಿಸಿದ್ದಾರೆ.

ಉಪೇಂದ್ರ ಅವರ ಈ ಟ್ವೀಟ್‍ಗೆ ಅವರ ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಪ್ರತಿಕ್ರಿಯೆ ನೀಡಿದ್ದು, ಇವೆಲ್ಲ ಜನರಿಗೆ ಅರ್ಥವಾಗಲ್ಲ. ಅರ್ಥವಾದವರು ಮೌನಕ್ಕೆ ಶರಣಾಗುತ್ತಾರೆ ಎಂದು ಟೀಕಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin