ಇದೇ ಮೊದಲ ಬಾರಿಗೆ ಸಕ್ರಿಯ ಕೊರೋನಾ ಪ್ರಕರಣಗಳಿಗಿಂತ ಚೇತರಿಕೆ ಪ್ರಮಾಣ ವೃದ್ಧಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜೂ.10- ದೇಶದಲ್ಲಿ ಕೊರೊನಾ ವೈರಸ್ ಸೋಂಕು ಮತ್ತು ಸಾವು ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದ್ದರೂ, ಇದೇ ಮೊದಲ ಬಾರಿಗೆ ಸಕ್ರಿಯ ಪ್ರಕರಣಗಳಿಗಿಂತ ಚೇತರಿಕೆ/ಗುಣಮುಖ ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿದೆ. ಇದು ದೇಶದ ಜನತೆಯಲ್ಲಿ ಸ್ವಲ್ಪ ಸಮಾಧಾನ ಮೂಡಿಸಿದೆ.

ಕಳೆದ ಎರಡು ದಿನಗಳಿಂದ ಸಕ್ರಿಯ ಮತ್ತು ಚೇತರಿಕೆ ಪ್ರಮಾಣ ಸರಿಸಮನವಾಗಿದ್ದು, ಇಂದು ಆಕ್ಟಿವ್ ಕೇಸ್‍ಗಳಿಗಿಂತಲೂ ರಿಕವರಿ ರೇಟ್ ಹೆಚ್ಚಾಗಿದೆ.  ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ ಸಹ ಹೆಚ್ಚಾಗುತ್ತಿದ್ದು, 1,33,632ಕ್ಕೇರಿದೆ. ಆದರೆ, ಈವರೆಗೆ 1,35,205 ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ವೈರಾಣು ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲಿ ಶೇ.48.99ರಷ್ಟು ವೃದ್ದಿ ಕಂಡುಬಂದಿರುವುದು ಹಾಗೂ ಚೇತರಿಕೆ ಪ್ರಕರಣ ಸಕ್ರಿಯ ಪ್ರಮಾಣಕ್ಕಿಂತ ಹೆಚ್ಚಾಗಿರುವುದು ಸಮಾಧಾನಕರ ಸಂಗತಿ.

ನಿನ್ನೆ ಒಂದೇ ದಿನ ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 279 ಮಂದಿ ಸಾವಿಗೀಡಾಗಿದ್ದು, ಒಟ್ಟಾರೆ ಮೃತ ಸಂಖ್ಯೆ 7,745ಕ್ಕೇರಿದೆ ಭಾರತದಲ್ಲಿ. ಸೋಂಕು ಪೀಡಿತರ ಸಂಖ್ಯೆ 2,76,585 ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Facebook Comments