ಬೈಕ್ ಕಳ್ಳತನ ಮಾಡುತ್ತಿದ್ದ ಮೆಕ್ಯಾನಿಕ್ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.11- ಅಪಾರ್ಟ್‍ಮೆಂಟ್‍ವೊಂದರ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಮೆಕ್ಯಾನಿಕ್ ಒಬ್ಬನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿ ನಾಲ್ಕು ಪ್ರಕರಣಗಳಿಗೆ ಸಂಬಂಸಿದಂತೆ 2.80 ಲಕ್ಷ ರೂ. ಮೌಲ್ಯದ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ರಹಮತ್ ಆಲಿ ಬಂತ ಆರೋಪಿ. ಕೆಂಗೇರಿ ನಿವಾಸಿಯಾದ ಈತ ದ್ವಿಚಕ್ರ ವಾಹನದ ಮೆಕ್ಯಾನಿಕ್. ಈತ ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗಳನ್ನು ಕಳ್ಳತನ ಮಾಡುವ ಪ್ರವೃತ್ತಿ ಹೊಂದಿದ್ದನು. ಈ ಹಿಂದೆ ನಂದಿನಿ ಲೇಔಟ್‍ನಲ್ಲಿ ದರೋಡೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದುದು ಪೊಲೀಸರ ವಿಚಾರಣೆಯಿಂದ ತಿಳಿದುಬಂದಿದೆ.

ಈತನಿಂದ ಕೆಂಗೇರಿ, ಅಶೋಕನಗರ, ಕೋರಮಂಗಲ ಮತ್ತು ಕುಮಾರಸ್ವಾಮಿ ಲೇಔಟ್ ಠಾಣೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸೆ.5ರಂದು ರಾತ್ರಿ ಕೆಂಗೇರಿ ಉಪನಗರದ ಶಿರ್ಕೆ ಅಪಾರ್ಟ್‍ಮೆಂಟ್ ಮುಂಭಾಗ ನಿಲ್ಲಿಸಿದ್ದ 46 ಸಾವಿರ ರೂ. ಬೆಲೆಬಾಳು ದ್ವಿಚಕ್ರ ವಾಹನ ಕಳುವಾಗಿದ್ದ ಬಗ್ಗೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ಸ್‍ಪೆಕ್ಟರ್ ವಸಂತ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಇದೀಗ ಆರೋಪಿಯನ್ನು ಬಂಧಿಸಿ ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ 2.80 ಲಕ್ಷ ಬೆಲೆಬಾಳುವ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Facebook Comments