ನಕಲಿ ರೆಮ್ಡಿಸಿವರ್ ಮಾರಾಟ ಮಾಡುತ್ತಿದ್ದ ಮತ್ತೊಬ್ಬ ಸಿಸಿಬಿ ಬಲೆಗೆ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಏ.27- ಕೋವಿಡ್ ಸೋಂಕಿತರಿಗೆ ನೀಡುವ ರೆಮ್ಡಿಸಿವರ್ ಚುಚ್ಚುಮದ್ದನ್ನು ನಕಲಿ ಮಾಡಿ ಮಾರಾಟ ಮಾಡುತ್ತಿದ್ದ ಮತ್ತೊಬ್ಬ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಜೆಎಸ್‍ಎಸ್ ಆಸ್ಪತ್ರೆಯ ಸ್ಟಾಫ್‍ನರ್ಸ್ ಆಗಿದ್ದ ಗಿರೀಶ್ (34) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ರೆಮ್ಡಿಸಿವರ್ ಚುಚ್ಚುಮದ್ದನ್ನು ನಕಲಿ ಮಾಡಿ ಮಾರಾಟ ಮಾಡುತ್ತಿದ್ದ ಬಗ್ಗೆ ನಗರದ ನಜರ್‍ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಈ ಪ್ರಕರಣದಲ್ಲಿ ಇದುವರೆಗೂ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಈ ಹಿಂದೆ ಪ್ರಶಾಂತ್, ಮಂಜುನಾಥ್, ಸುಜಯ್‍ನನ್ನು ಬಂಧಿಸಿದ್ದು, ಪೊಲೀಸರು ಇದೀಗ ಗಿರೀಶ್‍ನನ್ನು ಬಲೆಗೆ ಬೀಳಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Facebook Comments

Sri Raghav

Admin