ರೆಮ್ ಡೆಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ತಂತ್ರಜ್ಞಾನ ಆಧಾರಿತ ವ್ಯವಸ್ಥೆ: ಸಚಿವ ಸುಧಾಕರ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 23- ರೆಮ್ ಡೆಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಸೋಂಕಿತ ವ್ಯಕ್ತಿಯ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಔಷಧ ಹಂಚಿಕೆ ಮಾಡಲಾಗಿದೆ ಎಂದು ಎಸ್ ಎಂಎಸ್ ಸಂದೇಶ ಕಳುಹಿಸಲಾಗುತ್ತದೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಸಾರ್ವಜನಿಕರು https://t.co/1wB9AWJSk9 ಈ ಲಿಂಕ್ ಮೂಲಕ ತಮಗೆ ಹಂಚಿಕೆಯಾಗಿರುವ ಔಷಧದ ಬಗ್ಗೆ ಮಾಹಿತಿ ಪಡೆಯಬಹುದು.
ಒಂದು ವೇಳೆ ಸೋಂಕಿತ ವ್ಯಕ್ತಿಯ ಎಸ್ ಆರ್ ಎಫ್ ಐಡಿಗೆ ರೆಮ್ಡೆಸಿವಿರ್ ಔಷಧ ಹಂಚಿಕೆಯಾಗಿ ಆಸ್ಪತ್ರೆ ಅದನ್ನು ಆ ವ್ಯಕ್ತಿಯ ಚಿಕಿತ್ಸೆಗೆ ಒದಗಿಸದಿದ್ದಲ್ಲಿ ಇದೇ ಲಿಂಕ್ ಮೂಲಕ ಸರ್ಕಾರಕ್ಕೆ ವರದಿ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಪಾರದರ್ಶಕ ವ್ಯವಸ್ಥೆಯಿಂದ ಕಾಳಸಂತೆ ಮಾರಾಟಕ್ಕೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕೋಣ ಎಂದು ಅವರು ಹೇಳಿದ್ದಾರೆ.

Facebook Comments