ಈಶ್ವರಪ್ಪ ನಡೆಗೆ ಬೇಸರ ವ್ಯಕ್ತಪಡಿಸಿದ ರೇಣುಕಾಚಾರ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.1- ಲೋಕಸಭೆ, ವಿಧಾನಸಭೆ ಉಪಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ಸಚಿವ ಈಶ್ವರಪ್ಪ ಅವರು ಪತ್ರ ಬರೆದಿರುವುದು ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲವೇ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು ಪತ್ರ ಬರೆದಿರುವುದರಿಂದ ಪಕ್ಷದ ಇಮೇಜ್ ಹಾಳಾಗುವುದಿಲ್ಲವೇ ಎಂದು ಪ್ರಶ್ನಿಸಿರುವ ಅವರು,

ಈಶ್ವರಪ್ಪನವರಂತಹ ಹಿರಿಯ ಸಚಿವರೇ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆಯುತ್ತಾರೆ ಎಂದರೆ ಹೇಗೆ? ಇದರ ಬದಲು ನಾಲ್ಕು ಗೋಡೆಗಳ ನಡುವೆ ಸಮಾಲೋಚನೆ ಮಾಡಿ ಬಗೆಹರಿಸಿಕೊಳ್ಳಬಹುದಿತ್ತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 60 ಶಾಸಕರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಅನುದಾನಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರು ಅನುದಾನ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಭೇಟಿ ಮಾಡುವ ಮುನ್ನ ಈಶ್ವರಪ್ಪ ಅವರನ್ನು ಭೇಟಿ ಮಾಡಿ ಅನುದಾನಕ್ಕೆ ಮನವಿ ಮಾಡಿದ್ದೆವು. ಆದರೆ ಅವರು ಸ್ಪಂದಿಸಲಿಲ್ಲ. ಆದಕಾರಣ ಶಾಸಕರು ವಿಧಿ ಇಲ್ಲದೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಅನುದಾನಕ್ಕೆ ಮನವಿ ಮಾಡಬೇಕಾಗಿತ್ತು ಎಂದು ಸಮರ್ಥಿಸಿಕೊಂಡರು.

Facebook Comments