ಉಲ್ಟಾ ಹೊಡೆದ ಶಾಸಕ ರೇಣುಕಾಚಾರ್ಯ..! ಸಿಎಂ ಬದಲಾವಣೆ ಫಿಕ್ಸ್..?

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಜು.21- ಒಂದೆಡೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ನಡೆಯುತ್ತಿದ್ದರೆ, ಇದರ ಬೆನ್ನಲ್ಲೇ ಶಾಸಕ ರೇಣುಕಾಚಾರ್ಯ ದೆಹಲಿಗೆ ದೌಡಾಯಿಸಿದ್ದಾರೆ. ರೇಣುಕಾಚಾರ್ಯ ಅವರು ದಿಢೀರ್ ಆಗಿ ನಿನ್ನೆ ರಾತ್ರಿ ದೆಹಲಿಗೆ ತೆರಳಿದ್ದು, ಇದೀಗ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇಂದು ಉಸ್ತುವಾರಿ ಅರುಣ್ ಸಿಂಗ್ ಭೇಟಿ ಸಾಧ್ಯತೆ ಇದ್ದು, ಈ ಮೂಲಕ ಸಿ.ಡಿ ಭೀತಿಯಲ್ಲಿ ದೆಹಲಿಗೆ ದೌಡಾಯಿಸಿದ್ರಾ ಎಂ.ಪಿ ರೇಣುಕಾಚಾರ್ಯ ಎಂಬ ಪ್ರಶ್ನೆ ಮೂಡಿದೆ.

ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸದಂತೆ ನಡೆಯುತ್ತಿರುವ ಒತ್ತಡ ಹೇರುವ ತಂತ್ರದ ಮುಂದುವರಿದ ಭಾಗವಾಗಿ ರೇಣುಕಾಚಾರ್ಯ ಅವರು ದೆಹಲಿಗೆ ಆಗಮಿಸಿದ್ದು ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುತ್ತಾರೆ ಎಂಬ ವದಂತಿ ತೀವ್ರವಾಗಿ ಹರಡುತ್ತಿರುವ ಬೆನ್ನಲ್ಲೇ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹೊನ್ನಾಳಿಯ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಮಂಗಳವಾರ ರಾತ್ರಿ ದಿಢೀರನೆ ದೆಹಲಿಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸದಂತೆ ನಡೆಯುತ್ತಿರುವ ಒತ್ತಡ ಹೇರುವ ತಂತ್ರದ ಮುಂದುವರಿದ ಭಾಗವಾಗಿ ರೇಣುಕಾಚಾರ್ಯ ಅವರು ದೆಹಲಿಗೆ ಆಗಮಿಸಿದ್ದು ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ದೆಹಲಿ ಭೇಟಿ ವೇಳೆ ಯಡಿಯೂರಪ್ಪ ಅವರಿಗೆ ಈಗಾಗಲೇ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡುವಂತೆ ಹೈಕಮಾಂಡ್ ನಾಯಕರು ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಯಡಿಯೂರಪ್ಪ ತಮ್ಮ ಸ್ಥಾನ ಉಳಿಸಿಕೊಳ್ಳಲು ಹಲವು ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಅದೇ ಕಾರಣಕ್ಕೆ ಅವರೇ ರೇಣುಕಾಚಾರ್ಯ ಅವರನ್ನು ದೆಹಲಿಗೆ ಕಳುಹಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕೆಲ ದಿನಗಳ ಹಿಂದೆ ಶಾಸಕರ ತಂಡದೊಂದಿಗೆ ದೆಹಲಿಗೆ ಬರುವುದಾಗಿ ರೇಣುಕಾಚಾರ್ಯ ಹೇಳಿದ್ದರು. ಆದರೆ ಈಗ ದಿಢೀರನೇ ಒಬ್ಬರೇ ದೆಹಲಿಗೆ ಆಗಮಿಸಿದ್ದಾರೆ. ಆದುದರಿಂದ ಯಡಿಯೂರಪ್ಪ ಆಪ್ತ ವಲಯದ ಇತರೆ ಶಾಸಕರು ದೆಹಲಿಗೆ ಬರಲು ನಿರಾಕರಿಸಿದರಾ? ಯಡಿಯೂರಪ್ಪ ಬಲ ಕ್ಷೀಣಿಸುತ್ತಿದೆಯಾ ಎಂಬ ಅನುಮಾನಗಳು ಕೂಡ ಕಂಡುಬರುತ್ತಿವೆ.

ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸಬೇಕೆಂದು ಮಠಾಧೀಶರು ಒತ್ತಡ ಹೇರುವುದನ್ನು ಮುಂದುವರೆಸಿದ್ದಾರೆ. ಎಂ.ಬಿ.ಪಾಟೀಲ್, ಶಾಮನೂರು ಶಿವಶಂಕರಪ್ಪ ಅವರಂತಹ ಹಿರಿಯ ಕಾಂಗ್ರೆಸ್ ನಾಯಕರು ಕೂಡ ಯಡಿಯೂರಪ್ಪ ಪರ ವಕಾಲತ್ತು ವಹಿಸುತ್ತಿದ್ದಾರೆ. ಇಂದು ಬೆಳಿಗ್ಗೆಯೇ ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಿಂದ ಬಂದಿದ್ದ ಸ್ವಾಮೀಜಿಗಳು ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಭೇಟಿ ಮಾಡಿ ಬೆಂಬಲ ಸೂಚಿಸಿದ್ದಾರೆ. ಮಾಜಿ ಪೆÇಲೀಸ್ ಅಧಿಕಾರಿ ಹಾಗೂ ಲಿಂಗಾಯತ ನಾಯಕ ರೇವಣಸಿದ್ದಯ್ಯ ಕೂಡ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.

ಸಿಡಿ ಬಗ್ಗೆ ನಂಗೇನೂ ಗೊತ್ತಿಲ್ಲ. ಈ ಬಗ್ಗೆ ಹೈಕಮಾಂಡ್ ಭೇಟಿ ಮಾಡುವಷ್ಟು ದೊಡ್ಡವನಲ್ಲ. ಕ್ಷೇತ್ರದ ಕಾರ್ಯಕ್ಕೆ ದೆಹಲಿಗೆ ಬಂದಿದ್ದೇನೆ. ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳುವ ಮೂಲಕ ಪ್ರತಿಕ್ರಿಯಿಸಲು ನಿರಾಕರಿಸಿದರು.

ಇನ್ನು ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಲ್ಲ. ನಾನು ನನ್ನ ಕ್ಷೇತ್ರದ ಕಾರ್ಯಗಳಿಗಾಗಿ ದೆಹಲಿಗೆ ಬಂದಿದ್ದೇನೆ. ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇನೆ. ಉಸ್ತುವಾರಿಯನ್ನು ಸಾಧ್ಯವಾದರೆ ಭೇಟಿ ಮಾಡುತ್ತೇನೆ ಎಂದು ಶಾಸಕರು ಇದೇ ವೇಳೆ ಹೇಳಿದ್ದಾರೆ.

ನಾಯಕತ್ವದ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಈವರೆಗೂ ಹೈಕಮಾಂಡ್ ನಾಯಕರು ಏನೂ ಹೇಳಿಲ್ಲ. ಹೈಕಮಾಂಡ್ ನಾಯಕರು ಸೂಕ್ತ ನಿರ್ಧಾರ ತೆಗೆದುಕೊಳ್ತಾರೆ. ಸಿಎಂ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Facebook Comments