ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಮೇಲೆ ದುಷ್ಕರ್ಮಿಗಳ ದಾಳಿ..!

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ, ಏ.23-ಮೋಟಾರ್ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಅವರ ಪತ್ನಿ ಮೇಲೆ ದಾಳಿ ನಡೆಸಿದೆನ್ನಲಾದ ಘಟನೆ ನಿನ್ನೆ ಮಧ್ಯರಾತ್ರಿ ಮುಂಬೈನಲ್ಲಿ ನಡೆದಿದೆ. ಈ ಸಂಬಂಧ ಇಬ್ಬರನ್ನು ಪೊಲೀಸರು ಬಂದಿಸಿದ್ದಾರೆ.

ಮುಂಬೈನ ಲೋಯರ್ ಪರೇಲ್‍ನ ಬಾಂಬೆ ಡೈಯಿಂಗ್ ಕಾಂಪ್ಲೆಕ್ಸ್‍ನಲ್ಲಿರುವ ರಿಬ್ಲಿಕಲ್ ಟಿವಿ ಸ್ಟುಡಿಯೋದಿಂದ ಇಂದು ಮುಂಜಾನೆ ಅರ್ನಬ್ ಮತ್ತು ಅವರ ಪತ್ನಿ ಕಾರಿನಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಮೋಟಾರ್ ಬೈಕ್‍ನಲ್ಲಿ ಅವರ ಕಾರನ್ನು ಹಿಂಬಾಲಿಸಿದ ಇಬ್ಬರು ದುಷ್ಕರ್ಮಿಗಳು ಗಣಪತ್‍ರಾವ್ ಕದಂ ರಸ್ತೆಯಲ್ಲಿ ರಾತ್ರಿ 12.15ರಲ್ಲಿ ಅರ್ನಬ್ ವಾಹನದ ಮೇಲೆ ದಾಳಿ ನಡೆಸಿದರು.

ಕಾರಿನ ಕಿಟಕಿ ಗಾಜುಗಳನ್ನು ಒಡೆದು ದಂಪತಿ ಮೇಲೆ ಹಲ್ಲೆ ಮಾಡಲು ಯತ್ನಿಸಿದರು. ನಂತರ ಬಾಟಲ್‍ನಲ್ಲಿದ್ದ ಇಂಕ್‍ನನ್ನು ಕಾರಿನ ಮೇಲೆ ಎರಚಿ ಅವಾಚ್ಯ ಶಬ್ಧಗಳಿಗೆ ನಿಂದಿಸಿ ಪರಾರಿಯಾದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ದಾಳಿ ಸಂಬಂಧ ಅರ್ನಬ್ ಗೋಸ್ವಾಮಿ ಪೊಲೀಸರಿಗೆ ದೂರು ನೀಡಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಇಬ್ಬರನ್ನು ಬಂಧಿಸಿದ್ದಾರೆ. ಇವರು ಯುವ ಕಾಂಗ್ರೆಸ್ ಕಾರ್ಯಕರ್ತರೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿಲಾಗುತ್ತಿದೆ.  ರಿಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ ಕಾಂಗ್ರೆಸ್ ನಾಯಕರ ಕುರಿತ ವರದಿ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ.

Facebook Comments

Sri Raghav

Admin